Skip to main content
BELAGAVI SPOORTI

ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ - 2026 ಮತ್ತು ಕೇರಳ- ಕರ್ನಾಟಕ ಉತ್ಸವದ ಉದ್ಘಾಟಕರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ

ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ - 2026 ಮತ್ತು ಕೇರಳ- ಕರ್ನಾಟಕ ಉತ್ಸವದ ಉದ್ಘಾಟಕರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ  image

ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ - 2026 ಮತ್ತು ಕೇರಳ- ಕರ್ನಾಟಕ ಉತ್ಸವದ ಉದ್ಘಾಟಕರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ ಕಳೆದ 36 ವರ್ಷಗಳಿಂದ ಕೇರಳ ರಾಜ್ಯದ ಕನ್ನಡ ಭಾಷೆ,ಸಾಹಿತ್ಯ, ಸಂಸ್ಕೃತಿ,ಇತಿಹಾಸ ಪರಂಪರೆಯನ್ನು ಅಂತರ ರಾಜ್ಯದ್ಯಂತ ಕನ್ನಡ ಜನತೆಗೆ ತಲುಪಿಸುವ ಉದ್ದೇಶದಿಂದ ಕೇರಳ,ಕರ್ನಾಟಕ ಹಾಗೂ ಅಖಿಲ ಭಾರತ ಮತ್ತು ಆನಿವಾಸಿ ಭಾರತೀಯ ಕನ್ನಡಿಗರು,ಕಲಾವಿದರು, ಸಾಹಿತಿಗಳನ್ನು ಆಮಂತ್ರಿಸಿ ರಾಜ್ಯ,ರಾಷ್ಟ್ರೀಯ,ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸಾಂಸ್ಕೃತಿಕ ವಿನಿಮಯಕ್ಕಾಗಿ ಕಾಸರಗೋಡಿನ ಮೀಪುಗುರಿ- ಪಾರೆಕಟ್ಟೆಯ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 28 ಮತ್ತು 29 ರಂದು ಐತಿಹಾಸಿಕ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ- ಕರ್ನಾಟಕ ಉತ್ಸವ ಕೇರಳ - ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಏರ್ಪಡಿಸಲಾಗಿದೆ.

ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ, ಕೇರಳ ಕರ್ನಾಟಕ ಉತ್ಸವವನ್ನು ಖ್ಯಾತ ಸಾಹಿತಿ, ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಅಧ್ಯಕ್ಷ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ ಎಂ ವೀರಪ್ಪ ಮೊಯಿಲಿ ಉದ್ಘಾಟಿಸಲು ಒಪ್ಪಿಗೆ ನೀಡಿರುತ್ತಾರೆ. ವಿವಿಧ ಕಲಾ ಪುಸ್ತಕ, ವಸ್ತು ಪ್ರದರ್ಶನಗಳ ಉದ್ಘಾಟನೆ, ಹೊಸ ಕೃತಿಗಳು, ಸ್ಮರಣ ಸಂಚಿಕೆ ಬಿಡುಗಡೆ, ಅಂತರ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ, ಅಂತರ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ, ಅಂತರ ರಾಜ್ಯಮಟ್ಟದ ಮಕ್ಕಳ ಕವಿಗೋಷ್ಠಿ ಭಾಷಾ ಬಾಂಧವ್ಯ ಗೋಷ್ಠಿ,ಹಾಸ್ಯ ಗೋಷ್ಠಿ, ಮಾಧ್ಯಮ ಗೋಷ್ಠಿ , ಗಡಿನಾಡು- ಹೊರನಾಡು ಅನಿವಾಸಿ ಭಾರತೀಯ ಕನ್ನಡಿಗರು -ಕನ್ನಡ ಸಂಘಟನೆಗಳು ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.

ಕೇರಳ ಮತ್ತು ಕರ್ನಾಟಕ ರಾಜ್ಯದ ವಿವಿಧ ಕಲಾ ಪ್ರಕಾರಗಳ ಪ್ರದರ್ಶನ ಹಾಗೂ ಪ್ರಸಿದ್ಧ ಚಿತ್ರ ಕಲಾವಿದರಿಂದ ಚಿತ್ರಕಲಾ ಪ್ರದರ್ಶನ ಪ್ರಾತ್ಯಕ್ಷಿಕೆ ನಡೆಯಲಿದೆ. ಸಮೂಹ ನೃತ್ಯ, ಜಾನಪದ ನೃತ್ಯ, ಸುಗಮ ಸಂಗೀತ,ದಾಸ ಸಂಕೀರ್ತನೆ,ಜಾನಪದ ಭಾವಗೀತೆ, ಚಲನಚಿತ್ರ ಗೀತಗಾಯನ,ದೇಶಭಕ್ತಿ ಗೀತೆಗಳ, ಸಮೂಹ ಗಾಯನಕ್ಕೆ ಅವಕಾಶವಿದೆ. ಆಸಕ್ತ ತಂಡಗಳು ಸಂಘ ಸಂಸ್ಥೆಗಳು ಪತ್ರ ಮುಖೇನ ಸಂಪರ್ಕಿಸಬಹುದು.

ಕೇರಳ- ಕರ್ನಾಟಕ ಉತ್ಸವದಲ್ಲಿ ಅಂತರ ರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯದ ವಿಶೇಷ ಜನಪದ ಕಲೆ, ಭರತನಾಟ್ಯ ಜಾನಪದ ನೃತ್ಯ, ನೃತ್ಯ ರೂಪಕ, ಐತಿಹಾಸಿಕ, ಚಾರಿತ್ರಿಕ,ಸಾಮಾಜಿಕ ನಾಟಕ ಹಾಗೂ ವಿವಿಧ ಜಾನಪದ ಕಲೆಗಳ ಪ್ರದರ್ಶನಗೊಳ್ಳಲಿರುವುದು. ಅಖಿಲ ಕರ್ನಾಟಕದ ಕಲೆ ಮತ್ತು ಸಂಸ್ಕೃತಿಯನ್ನು ಕಾಸರಗೋಡಿನಲ್ಲಿ ಪ್ರತಿಬಿಂಬಿಸಲಿದೆ. ಕಾಸರಗೋಡು ಕನ್ನಡಗ್ರಾಮದಲ್ಲಿ ವಿಶೇಷವಾಗಿ ನಮ್ಮೂರ ಕನ್ನಡ ಜಾತ್ರೆ ಕೃಷಿ ಮೇಳ, ಆಹಾರ ಮೇಳ, ವೈದ್ಯಕೀಯ ತಪಾಸಣಾ ಶಿಬಿರ ,ವಸ್ತು ಪ್ರದರ್ಶನ, ಪುಸ್ತಕ ಮೇಳ, ವ್ಯಂಗ್ಯ ಚಿತ್ರ ಛಾಯಾಚಿತ್ರ, ಚಿತ್ರಕಲಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ವಿವಿಧ ಉದ್ಯಮ, ಬ್ಯಾಂಕಿಂಗ್, ಗ್ರಾಮೀಣಾಭಿವೃದ್ಧಿ,ಖಾದಿ, ಕೃಷಿ,ಗುಡಿ ಕೈಗಾರಿಕೆ, ಸ್ವ- ಉದ್ಯೋಗ ಸಂಸ್ಥೆಗಳಿಂದ ತಮ್ಮ ಉತ್ಪನ್ನಗಳ ಪ್ರದರ್ಶನ, ಆಹಾರ ಮಳಿಗೆ ಮತ್ತು ಮಾರಾಟ ಮಳಿಗೆಗಳು ಇರುತ್ತದೆ. ಗಡಿನಾಡಾದ ಕಾಸರಗೋಡಿನ ಕನ್ನಡ ಗ್ರಾಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಕನ್ನಡಿಗರು, ಕನ್ನಡಾಭಿಮಾನಿಗಳು, ವಿವಿಧ ಉಪಭಾಷೆಯವರು, ಸಾಂಸ್ಕೃತಿಕ ರಾಯಭಾರಿಗಳು, ಸಾಹಿತಿಗಳು, ಕಲಾವಿದರು, ಮಾಧ್ಯಮದವರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕೇರಳ - ಕರ್ನಾಟಕ ಮತ್ತು ಭಾರತದ ಇತರ ರಾಜ್ಯಗಳಿಂದ ಸುಮಾರು 500 ಕ್ಕೂ ಹೆಚ್ಚು ಪ್ರತಿನಿಧಿಗಳ ಸಾಂಸ್ಕೃತಿಕ ನಿಯೋಗವು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಗಲ್ಫ್ ರಾಷ್ಟ್ರ ವಿದೇಶಗಳ ಅನಿವಾಸಿ ಭಾರತೀಯ ಕನ್ನಡಿಗರು, ಕೇರಳ, ಕರ್ನಾಟಕ ಹಾಗೂ ವಿವಿಧ ರಾಜ್ಯಗಳ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕನ್ನಡ ಗ್ರಾಮ,ಕನ್ನಡ ಗ್ರಾಮ ರಸ್ತೆ, ಕಾಸರಗೋಡು -671121

ಮೊಬೈಲ್ :-9448572016,

9901951965

Email:-Shivarama kasaragod @gmail.com

Karavalisamskrithikaprathistana@gmail.com

ಈ ವಿಳಾಸಕ್ಕೆ ಪತ್ರ ಬರೆಯುವ ಮೂಲಕ ಸಂಪರ್ಕಿಸಬಹುದು.

Comments