27th August 2024
ಟಿಬಿ ಡ್ಯಾಮ್ ನ ಸ್ಟಾಪ್ ಲಾಕ್ ಗೇಟ್ ಅಳವಡಿಸಿದ ಕಾರ್ಮಿಕರಿಗೆ ಸನ್ಮಾನಿಸಿ ಸಿಹಿ ತಿನ್ನಿಸಿ ಸಂಸದ ಜಿ ಕುಮಾರ ನಾಯಕ..
ದಿಟ್ಟ ಹೆಜ್ಜೆ ನ್ಯೂಸ್
ಹೊಸಪೇಟೆ: ಕರ್ನಾಟಕದ ನಾಲ್ಕು ಜಿಲ್ಲೆಗಳು ಸೇರಿದಂತೆ ತೆಲಂಗಾಣ ಮತ್ತು ಆಂಧ್ರಪ್ರದೇಶದ ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯದಿಂದ ನದಿಗೆ ಹರಿದು ಹೋಗುತ್ತಿದ್ದ 40 ಟಿಎಂಸಿ ನೀರು ತಡೆಯುವ ಸ್ಟಾಪ್ ಲಾಕ್ ಗೇಟ್ ಅಳವಡಿಕೆಯಲ್ಲಿ ಯಶಸ್ವಿಯಾದ ಎಲ್ಲಾ ಕಾರ್ಮಿಕರು ಮತ್ತು ಅಧಿಕಾರಿಗಳಿಗೆ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಕುಮಾರ್ ನಾಯಕ ಅವರು ಅಭಿನಂದನೆ ಸಲ್ಲಿಸಿದರು.
ಅವರಿಂದು ತುಂಗಭದ್ರಾ ಜಲಾಶಯದ ಪ್ರದೇಶಕ್ಕೆ ಭೇಟಿ ನೀಡಿ,ನದಿಗೆ ಹರಿದು ಹೋಗುತ್ತಿರುವ ನೀರು ತಡೆಯುವ ಗೇಟ್ ಅಳವಡಿಕೆಯಲ್ಲಿ ಯಶಸ್ವಿಯಾದ ಕಾರ್ಮಿಕರು,ಅಧಿಕಾರಿಗ ಅಭಿನಂದಿಸಿ ಮಾತನಾಡಿದರು.
ಭೋರ್ಗರೆದು ಪ್ರವಾಹದ ನೀರಿನೊಂದಿಗೆ ಸೆಣಸಾಡಿ ಜಲಾಶಯದ ಕುಸಿದ 19ನೇ ಗೇಟ್ ಸ್ಥಳದಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸುವ ಮೂಲಕ ತುಂಗಭದ್ರಾ ಜಲಾಶಯದಿಂದ ನದಿಗೆ ಹರಿದು ಹೋಗುತ್ತಿರುವ ಸುಮಾರು 40 ಟಿಎಂಸಿ ನೀರು ಉಳಿಸುವಲ್ಲಿ ಅಧಿಕಾರಿಗಳು ಮತ್ತು ವಿವಿಧ ಕಂಪನಿಯ ಕಾರ್ಮಿಕರ ಸಾಧನೆ ಶ್ಲಾಘನೀಯವಾಗಿದೆ.
ನಾನು ಒಬ್ಬ ಸಿವಿಲ್ ಇಂಜಿನಿಯರ್ ಆಗಿದ್ದರಿಂದ, ಈ ಕಾರ್ಯ ಎಂತಹ ಕಷ್ಟಕರ ಎನ್ನುವ ಮನವರಿಕೆ ಇದೆ. ಕೇವಲ ಆರು ದಿನಗಳಲ್ಲಿ ನದಿಗೆ ಹರಿದು ಹೋಗುತ್ತಿರುವ ಬಹುಪಾಲು ನೀರು ತಡೆಯುವಲ್ಲಿ ಯಶಸ್ವಿಯಾದ ಜಲಾಶಯದ ಕಾರ್ಮಿಕರು, ಅಧಿಕಾರಿಗಳು ಮತ್ತು ವಿವಿಧ ಕಂಪನಿಯ ತಜ್ಞರು ಪ್ರಶಂಸಾರ್ಹರಾಗಿದ್ದಾರೆ.
ಜಲಾಶಯದ 19ನೇ ಗೇಟ್ ಕುಸಿತದಿಂದ ಭಾರಿ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿರುವ ಘಟನೆಯಿಂದ ರೈತರು ತೀವ್ರ ಆತಂಕಕ್ಕೆ ಗುರಿಯಾಗಿದ್ದರು. ಗೇಟ್ ಅಳವಡಿಕೆ ಹೇಗೆ ಎನ್ನುವ ಸವಾಲನ್ನು ಜಲಾಶಯದ ಸಿಬ್ಬಂದಿ ವರ್ಗ ಹಾಗೂ ಕಾರ್ಮಿಕರು ನಿವಾರಿಸುವ ಮೂಲಕ ಇಂದು ರೈತರ ಆತಂಕ ದೂರ ಮಾಡಿದ್ದಾರೆ. ಇವರ ಕಾರ್ಯ ಸಾಧನೆಗೆ ಸರ್ಕಾರದಿಂದ ಸೂಕ್ತ ಬಹುಮಾನ ನೀಡುವಂತೆ ನಾನು ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡುವುದಾಗಿ ಭರವಸೆ ನೀಡಿದರು.
ಅದೃಷ್ಟವಶಾತ್ ಮೇಲ್ಭಾಗದಲ್ಲಿ ಇನ್ನೂ ಮಳೆ ಪ್ರಮಾಣ ಉತ್ತಮವಾಗಿದೆ. ಸ್ಟಾಪ್ ಲಾಂಗ್ ಗೇಟ್ ಅಳವಡಿಕೆಯ ನಂತರ ಆರು ಟಿಎಂಸಿ ನೀರು ಜಲಾಶಯಕ್ಕೆ ಸಂಗ್ರಹವಾಗಿದೆ. ಎಲ್ಲ ಶ್ರೇಯಸ್ಸು ಇಲ್ಲಿಯ ಕಾರ್ಮಿಕರು ಮತ್ತು ಅಧಿಕಾರಿಗಳಿಗೆ ಸಲ್ಲುತ್ತದೆ ಎಂದರು.
undefined
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ ಸಹಾಯವಾಣಿ-೧೯೩೦ ಹಾಗೂ ವೆಬ್ಬಾಟ್ ಉನ್ನತೀಕರಣ
ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಅಲೆಮಾರಿ ಸಮುದಾಯ ಜನರಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಲಾಗಿದೆ ಜಾಗೃತಿ ಮೂಡಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು -ಪಲ್ಲವಿ ಜಿ.