
5th September 2025
ಕುಷ್ಟಗಿ : ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಕೊಪ್ಪಳ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಕುಷ್ಟಗಿ, ಮತ್ತು NSS ಘಟಕ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕುಷ್ಟಗಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
HIV ವೈರಸ್ಸಿನಿಂದ ಉಂಟಾಗುವ ಏಡ್ಸ್ ಪ್ರತಿರಕ್ಷಣಾ
ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ರೋಗದ ಹರಡುವಿಕೆ ಮತ್ತು ತಡೆಗಟ್ಟುವಿಕೆಯ ಕುರಿತು ಯುವ ಜನರಲ್ಲಿ ಸರಿಯಾದ ಮಾಹಿತಿಯ ಕೊರತೆ ಇದೆ.
ಈ ವೈರಸ್ಸಿಗೆ ಸರಿಯಾದ ಚಿಕಿತ್ಸೆ ಇಲ್ಲದಿದ್ದರೂ
ಅಂಟಿರೆಟ್ರೋವೈರಲ್ ಥೇರೆಪಿಯಿಂದ ನಿಯಂತ್ರಿಸಬಹುದು. HIV ಪೀಡಿತರಿಗೆಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಸಹಾಯವಾಣಿ ಕೇಂದ್ರಗಳು ಇರುತ್ತವೆ ಎಂದು ಶ್ರೀಮತಿ ವಿಜಯಲಕ್ಷ್ಮಿ ICTC ಆಪ್ತ ಸಮಾಲೋಚಕರು ತಾಲೂಕು ಆಸ್ಪತ್ರೆ ಕುಷ್ಟಗಿ ಇವರು,
ಕುಷ್ಟಗಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ
ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಏಡ್ಸ್ ರೋಗ ನಿಯಂತ್ರಣ ಹಾಗೂ ಮುಂಜಾಗೃತಾ ಎಂಬ ವಿಷಯ ಕುರಿತು ಮಾತನಾಡಿದರು.
RKSK ಆಪ್ತ ಸಮಾಲೋಚಕರಾದ ಖಾದಿರ್ ಭಾಷಾ ಮಗಿ ಹಾಗೂ ಶಿವಾನಂದ್ ಪೂಜಾರ್
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಮತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ವಾದಿರಾಜ್ ಮಠದ್ ಅವರು ಕಾರ್ಯಕ್ರಮ ಕುರಿತು ಮಾತನಾಡಿದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾಕ್ಟರ್ ಸೌಮ್ಯ TG ಕಾರ್ಯಕ್ರಮ ನಿರುಪಿಸಿದರು. ಕುಮಾರಿ ಚೈತ್ರಾ ಉಪನ್ಯಾಸಕರು ಅತಿಥಿಗಳನ್ನು ಸ್ವಾಗತಿಸಿದರು.
ವಿಜಯಕುಮಾರ್ ವೆಲ್ಲೂರೆ ವಂದಿಸಿದರು.
ಕಾರ್ಯಕ್ರಮದಲ್ಲಿ ವೀರಣ್ಣಗೌಡ, ಮಂಜುಳಾ, ಆನಂದ ದೇಸಾಯಿ ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಭೀಮಸೇನ್ ರಾವ್ ಕುಲಕರ್ಣಿ, ಜಿಎಂ ನ್ಯೂಜ್ ಕುಷ್ಟಗಿ.
ಕುಷ್ಟಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಕೊಪ್ಪಳ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಕುಷ್ಟಗಿ, ಮತ್ತು NSS ಘಟಕ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶ್ರೀ ಗುರು ಶಂಕರಲಿಂಗ ಶಿವಯೋಗಿಗಳ ಜಾತ್ರೆಯ ನಿಮಿತ್ಯ 3ನೇ ದಿನದಂದು ಬೆಟ್ಟದಲ್ಲಿ ಸತತ 24 ತಾಸು ಭಜನೆ
ಹಿರೇಮನ್ನಾಪೂರ ಗ್ರಾಮದಲ್ಲಿ ಗುರುವಾರ ಎರಡನೇ ದಿನದ ಪುರಾಣ ಕಾರ್ಯಕ್ರಮ ಉದ್ಘಾಟನೆ
ಶ್ರೀ ಶಂಕರಲಿಂಗ ಗುರುವರ್ಯರ 41 ನೇ ಪುಣ್ಯತಿಥಿ ಅಂಗವಾಗಿ ಮೊದಲನೇ ದಿನ ಪುರಾಣದ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಶ್ರೀಗಳವರಿಂದ ಚಾಲನೆ.
ಪರಮಪೂಜ್ಯ ಶ್ರೀ ಶಂಕರಲಿಂಗ ಗುರುವರ್ಯರ 41 ನೇ ಪುಣ್ಯತಿಥಿ, ಜಾತ್ರಾ ಮಹೋತ್ಸವ.
ಶ್ರೀ ಸಂಜೀವ ಜೋಶಿ ಅವರಿಂದ ಚಿಪ್ಪಗಿರಿಯ ತಪೋನಿಧಿ ಶ್ರೀ ವಿಜಯದಾಸರ ಸೇವಾ ಬಳಗದಲ್ಲಿ ಇಂದು 250ನೇ ನೇರ ಪ್ರಸಾರದ ಸಂಗೀತ ಕಾರ್ಯಕ್ರಮ