

19th January 2026

ಕುಷ್ಟಗಿ:- ತಾಲೂಕಿನ ಕಂದಕೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲೂಕು ಘಟಕ ಕುಷ್ಟಗಿ, ಇವರ ಸಹಯೋಗದೊಂದಿಗೆ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ರವಿವಾರ ನಡೆಯಿತು.
ಕಂದಕೂರು ಗ್ರಾಮದ ಭೀಮನಗೌಡ ಪಾಟೀಲ ಮತ್ತು ಶರಣಪ್ಪ, ಶಾಲೆಯ ಶಿಕ್ಷಕರಾದ ಕುಮಾರಸ್ವಾಮಿ ಹಿರೇಮಠ, ಸಭೆಯ ಅಧ್ಯಕ್ಷರಾದ ಶಕುಂತಲಮ್ಮ, ಹೊಲಿಗೆ ತರಬೇತಿ ಶಿಕ್ಷಕಿ ನೀಲಮ್ಮ ರವರು
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮ ಕುರಿತು ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾದ ಕುಮಾರಸ್ವಾಮಿ ಹಿರೇಮಠ ಮಾತನಾಡಿ ಇವತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಒಂದಲ್ಲ ಒಂದು ರೀತಿಯಲ್ಲಿ ಸಾಮಾಜಿಕವಾಗಿ ಅನೇಕ ಕಾರ್ಯಕ್ರಮಗಳನ್ನು ಯೋಜನೆಯ ಮೂಲಕ ರೂಪಿಸಿ ಸಮಾಜದ ಒಳಿತಿಗಾಗಿ ಸಾಕಷ್ಟು ಕಾರ್ಯಕ್ರಮವನ್ನು ಮಾಡಿ ನಿರುದ್ಯೋಗಿಗಳಿಗೆ ಉದ್ಯೋಗವನ್ನು ಕೊಡುವಂತಹ ಕೆಲಸವನ್ನು ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಹೇಳಿದರು
ಇದೆ ವೇಳೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮದ ಸುಮಾರು 35 ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ನೀಡಿ ಸೇವಾ ಪ್ರಮಾಣ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶಕುಂತಲಾ, ಹೊಲಿಗೆ ಶಿಕ್ಷಕಿ ನೀಲಮ್ಮ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ರೂಪ, ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿ ಗಿರಿಜಾ ಸೇರಿದಂತೆ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು...
ರಿಪೋರ್ಟರ್, ಭೀಮಸೇನರಾವ್ ಕುಲಕರ್ಣಿ ಜಿಎಂ ನ್ಯೂಸ್ ಕುಷ್ಟಗಿ.
ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲೂಕು ಘಟಕ ಕುಷ್ಟಗಿ, ಇವರ ಸಹಯೋಗದೊಂದಿಗೆ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ರವಿವಾರ ನಡೆಯಿತು.

ವಿಶ್ವಕರ್ಮ ಸಮಾಜದ ಭಾಂಧವರು ಕುಲಕಸುಬನ್ನು ಎಂದಿಗೂ ಮರೆಯಬಾರದು: ದೊಡ್ಡಬಸವನಗೌಡ ಪಾಟೀಲ್ ಬಯ್ಯಾಪುರ

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ ಸಂಸದೆ ಪ್ರಿಯಾಂಕಾಗೆ ಕರವೇ ಮನವಿ

ನೀರು ಬಳಕೆದಾರರ ಸಂಘಗಳು ಕಡೇ ಭಾಗದ ರೈತನಿಗೆ ನೀರು ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸಿಲಿ:ಮಧು ಜಿ.ಮಾದೇಗೌಡ