

24th April 2026

ಕೊಪ್ಪಳ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಪ್ಪಳ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಡಾ. ರಾಜ್ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಪ್ರಯುಕ್ತ ರಾಜ್ ಸಂಭ್ರಮ-2026 ಡಾ. ರಾಜ್ಕುಮಾರ್ ರವರ ಚಲನಚಿತ್ರ ಗೀತೆಗಳ ಗಾಯನ ಮತ್ತು ಡಾ. ರಾಜ್ಕುಮಾರ್ ಅವರ ಸಿನೆಮಾಗಳ ಡೈಲಾಗ್ (ಮಿಮಿಕ್ರಿ) ಕಾರ್ಯಕ್ರಮವನ್ನು ಏಪ್ರಿಲ್ 24 ರಂದು ಸಂಜೆ 5.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ,ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಬಾಗಲಕೋಟೆಯ ಕೃಷ್ಣ ಮೇಲ್ದಂಡೆ ಯೋಜನೆ ಹಾಗೂ ಭೂಸ್ವಾದೀನ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ರಾಜ್ ಅವರು ಆಗಮಿಸುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ಸಾವಿತ್ರಿ ಮುಜಮದಾರ ಅವರು ಪಾಲ್ಗೊಳ್ಳುವರು ಎಂದು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಪ್ಪಳ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಡಾ. ರಾಜ್ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಪ್ರಯುಕ್ತ ರಾಜ್ ಸಂಭ್ರಮ-2026 ಡಾ. ರಾಜ್ಕುಮಾರ್ ರವರ ಚಲನಚಿತ್ರ ಗೀತೆಗಳ ಗಾಯನ ಮತ್ತು ಡಾ. ರಾಜ್ಕುಮಾರ್ ಅವರ ಸಿನೆಮಾಗಳ ಡೈಲಾಗ್ (ಮಿಮಿಕ್ರಿ) ಕಾರ್ಯಕ್ರಮವನ್ನು ಏಪ್ರಿಲ್ 24 ರಂದು ಸಂಜೆ 5.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.

ಶ್ರೀ ಮಹಾಲಕ್ಷ್ಮೀ (ಪದ್ಮಾವತಿ) ದೇವಿಯ ಹಾಗೂ ಶ್ರೀ ಜೋಡು ಹನುಮಂತದೇವರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ : ಶ್ರೀ ಶ್ರೀ ಶ್ರೀ 1008 ಶ್ರೀ ಮದುತ್ತರಾದಿ ಮಠಾದೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ.

77 ನೇ ಗಣರಾಜ್ಯೋತ್ಸವದ ಪ್ರಯುಕ್ತ ಶ್ರೀಮತಿ ರಶ್ಮಿ ಪ್ರಶಾಂತ್ ಕುಲಕರ್ಣಿ ಕುಷ್ಟಗಿ ಬರೆದಿರುವ ಲೇಖನ.