25th June 2025
ಮನುಷ್ಯನ ಜೀವನ ಅತ್ಯಮೂಲ್ಯವಾಗಿದ್ದು ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ಜೀವನವೇ ಹಾಳಾಗುತ್ತದೆ. ಇದು ಕೇವಲ ವ್ಯಕ್ತಿ, ಕುಟುಂಬ ಸಮಾಜಕ್ಕಷ್ಟೇ ಅಲ್ಲದೇ ಇಡೀ ಮನುಕುಲದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಆದ್ದರಿಂದ ಯಾರೊಬ್ಬರೂ ಮಾದಕ ವಸ್ತುಗಳ ಮೋಹಕ್ಕೆ ಸಿಲುಕಬಾರದು ಎಂದು ತಹಸೀಲ್ದಾರ್ ವಾಸುದೇವ ವಿ ಸ್ವಾಮಿ ಹೇಳಿದರು.
ಅವರು ಮಂಗಳವಾರ ಲಕ್ಷ್ಮೇಶ್ವರ ಪೊಲೀಸ್ ಠಾಣಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ನಿಮಿತ್ತ ಬೈಕ್ ರ್ಯಾಲಿ ಮೂಲಕ ಹಮ್ಮಿಕೊಳ್ಳಲಾದ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿ, ಮಾದಕ ವಸ್ತುಗಳಿಂದ ಸಮಾಜ ಮುಕ್ತವಾಗಿರಬೇಕು. ಜೂನ್
೨೬ ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ಆಚರಿಸಲಾಗುತ್ತದೆ ಎಂದರು.
ಸಿಪಿಐ ನಾಗರಾಜ ಮಾಡಳ್ಳಿ ಮಾತನಾಡಿ, ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಎಂದು ಗೊತ್ತಿದ್ದರೂ ಮಾದಕ ವಸ್ತುಗಳ ದುಶ್ಚಟಗಳಿಗೆ ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಯುವಕರು ಕುಡಿತ, ಗುಟ್ಕಾ, ಗಾಂಜಾ, ಅಫೀಮು ಇತ್ಯಾದಿಗಳಿಂದ ದೂರವಿರಬೇಕು. ದುಶ್ಚಟಗಳಿಗೆ ಬಲಿಯಾಗಿ ಆರೋಗ್ಯ, ಸಮಯ ಹಾಳು ಮಾಡಿಕೊಳ್ಳುವ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾನೂನಿನ ಹೊರತಾಗಿಯೂ ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ. ಅದೇ ರೀತಿ ಪ್ರತಿಯೊಬ್ಬಬೈಕ್ ಸವಾರ ಹೆಲ್ಮೆಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಎಂದು ಹೇಳಿದರು.
ಪೊಲೀಸ್ ಠಾಣೆಯಿಂದ ಪ್ರಾರಂಭವಾದ ಬೈಕ್ ರ್ಯಾಲಿ ಪಟ್ಟಣದ ಮುಖ್ಯ ಬಜಾರ್ ರಸ್ತೆ ಮೂಲಕ ಸಾಗಿ ಪಂಪ ವೃತ್ತ, ಕೋರ್ಟ್ ಸರ್ಕಲ್, ಆಸಾರ ಓಣಿ, ವಿದ್ಯಾರಣ್ಯ ಸರ್ಕಲ್, ಶಿಗ್ಲಿ ನಾಕಾ, ಗದಗ ನಾಕಾ, ಬಸ್ ನಿಲ್ದಾಣ ಪ್ರಮುಖ ಮಾರ್ಗದಲ್ಲಿ ಸಂಚರಿಸಿತು.
ಬೈಕ್ ರ್ಯಾಲಿಯಲ್ಲಿ ತಾಪಂ ಇಓ ಕೃಷ್ಣಪ್ಪ ಧರ್ಮರ,ಪುರಸಭೆ ಮುಖ್ಯಾದಿಕಾರಿ ಮಹೇಶ ಹಡಪದ,ಪಿಎಸ್ಐ ನಾಗರಾಜ ಗಡಾದ, ಕ್ರೈಂ ಪಿಎಸ್ಐ ಟಿ.ಕೆ ರಾಠೋಡ, ಎ ಎಸ್ ಐ ಗಳಾದ ಎಸ್.ಎಸ್ ಮಕಾಂದಾರ, ಎ,ಎನ್ ಮೌಲ್ವಿ, ವೈ.ಸಿ ದೊಡ್ಡಮನಿ ಸೇರಿ ಪೊಲೀಸರು ಭಾಗವಹಿಸಿದ್ದರು.
ವರದಿ: ವೀರೇಶ್ ಗುಗರಿ
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬ ಆಚರಣೆ-ಬೋಯಪಾಟಿ ವಿಷ್ಣುವರ್ಧನ್
ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮೆ ಕೊಡಲಿ-ಶ್ರೀರಾಮುಲು