1st July 2025
ಬೆಂಗಳೂರು:
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆ ಮೂಲಕ ಮೂರು ದಶಕಗಳ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಲಿದೆ.ಗ್ರಾಮೀಣ ಪತ್ರಕರ್ತರಿಗೂ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಸತತ ನಡೆಸಿದ ಹೋರಾಟದ ಲವಾಗಿ ಈ ಯೋಜನೆ ಜಾರಿಗೆ ಬರುತ್ತಿದೆ.ದಾವಣಗೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಬಸ್ ಪಾಸ್ ನೀಡಬೇಕೆಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳ ಮುಂದೆ ಹಕ್ಕೋತ್ತಾಯ ಮಂಡಿಸಿದ್ದರು. ವೇದಿಕೆಯಲ್ಲಿಯೇ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಿಎಂ ಮನವೊಲಿಕೆ ಮಾಡಿದರು. ಕೂಡಲೇ ಅದಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಉಚಿತ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ ಎಂದು ಭರವಸೆ ನೀಡಿದ್ದಲ್ಲದೆ, ಬಜೆಟ್ನಲ್ಲಿಯು ಘೋಷಣೆ ಮಾಡಿದ್ದು, ಮರೆಯಲಾಗದ ಕ್ಷಣವಾಗಿತ್ತು.ಬಸ್ ಪಾಸ್ ಯೋಜನೆ ಜಾರಿಗೆ ನೀಡಲು ಮೊದಲ ಬಾರಿಗೆ ಮನಸ್ಸು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಸ್ತ ಪತ್ರಕರ್ತರ ಪರವಾಗಿ ಧನ್ಯವಾದಗಳು. ಈ ಯೋಜನೆ ಜಾರಿ ಹಿಂದೆ ತೆರೆ ಮರೆಯ ಶಕ್ತಿಯಾಗಿ ಸಂಘಟನೆ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್, ವಾರ್ತಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
26th June 2025
ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಹೇರಳವಾಗಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಿ ಎಂದು ಜಿಲ್ಲಾ ಬಿಜೆಪಿ ಘಟಕದ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಜಿಲ್ಲಾಡಳಿತ ಭವನದಲ್ಲಿ ಡಿಸಿ ಸುರೇಶ ಇಟ್ನಾಳ್ ಹಾಗೂ ಎಸ್ಪಿ ಕಚೇರಿಯಲ್ಲಿ ಎಸ್ಪಿ ಡಾ.ರಾಮ.ಎಲ್.ಅರಸಿದ್ದಿ ಅವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದ ಬಿಜೆಪಿ ನಾಯಕರು, ಕೂಡಲೇ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿ, ಇಲ್ಲದಿದ್ದರೇ ನಿಸರ್ಗದ ಸಂಪತ್ತು ವ್ಯಾಪಕ ಪ್ರಮಾಣದಲ್ಲಿ ಹಾಳಾಗಲಿದೆ ಎಂದು ಕಿಡಿಕಾರಿದರು.
ಕಳೆದ ಹಲವು ತಿಂಗಳಿಂದ ಕೊಪ್ಪಳ ತಾಲೂಕಿನ ಅಳವಂಡಿ ಹೋಬಳಿ, ಕಿನ್ನಾಳ, ಓಜನಹಳ್ಳಿ ಸೇರಿದಂತೆ ವಿವಿದೆಡೆ ವ್ಯಾಪಕವಾಗಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡಲಾಗುತ್ತಿದೆ.
ಈ ಪೈಕಿ ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಬಳಿ ಈಚೆಗೆ ದಾಳೆ ನಡೆಸಿ, ಅಕ್ರಮ ಮರಳನ್ನು ವಶಪಡಿಸಿಕೊಂಡಿರುವುದು ಸುತ್ಯಾರ್ಹ.
ಇದೇ ರೀತಿ ಉಳಿದ ಕಡೆ ದಾಳಿ ನಡೆದು, ದಂಧೆಕೋರರಿಗೆ ಕಡಿವಾಣ ಬಿಳಲಿ ಎಂದು ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಬಸವರಾಜ ಧಡೆಸೂಗೂರು, ರಾಜ್ಯಕಾರ್ಯಕಾರಿಣಿ ಸದಸ್ಯರಾದ ಡಾ. ಬಸವರಾಜ್ ಕ್ಯಾವಟರ್, ಪ್ರಮುಖರಾದ ಶ್ರೀ ಚಂದ್ರಶೇಖರ ಕವಲೂರ್, ಕೊಪ್ಪಳ ಗ್ರಾಮೀಣ ಮಂಡಲ ಅಧ್ಯಕ್ಷರಾದ ಶ್ರೀ ಪ್ರದೀಪ್ ಹಿಟ್ನಾಳ್, ನಗರ ಮಂಡಲ ಅಧ್ಯಕ್ಷರಾದ ಶ್ರೀ ರಮೇಶ ಕವಲೂರ್, ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಗಣೇಶ ಹೊರತಟ್ನಾಳ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸುನಿಲ್ ಹೆಸರೂರ್, ಬಸವರಾಜ್ ಬನ್ನಿಕೊಪ್ಪ, ಶ್ರೀ ಉಮೇಶ್ ಹಿರೇಮಠ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಶ್ರೀಮತಿ ವಾಣಿಶ್ರೀ ಹಿರೇಮಠ, ಶ್ರೀಮತಿ ಕೀರ್ತಿ ಪಾಟೀಲ್ ಭಾಗಿಯಾಗಿದ್ದರು.
25th June 2025
ಗದಗ: ಗದಗ್ ಪೊಲೀಸ್ ಉಪವಿಭಾಗ ವತಿಯಿಂದ ಮಾನ್ಯ ಶ್ರೀ ಮುರ್ತುಜ್ ಖಾದ್ರಿ ಡಿ ಎಸ್ ಪಿ ಗದಗ್ ರವರ ನೇತೃತ್ವದಲ್ಲಿ ಸಿಪಿಐ ಶ್ರೀ ಧೀರಜ್ ಸಿಂದೆ. ಪಿ. ಐ. ಶ್ರೀ ಸಿದ್ದರಾಮೇಶ್ವರ ಗಡೆದ ಲಾಲಾಸಾಬ್ ಜೂಲಕಟ್ಟಿ ಹಾಗೂ ಪಿಎಸ್ಐ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಒಟ್ಟು 150 ಅಧಿಕಾರಿಗಳು ಹಾಗೂ ಸಿಬ್ಬಂದಿ ಜನರು ರೋಡ್ ವಾಕ್ ಮೂಲಕ ಅಂತರಾಷ್ಟ್ರೀಯ ಮಾದಕ ದ್ರವ್ಯ ನಿರ್ಮೂಲನೆ ಅಂಗವಾಗಿ ಮುಳುಗುಂದ್ ನಾಕಾ ದಿಂದ ಜುಮ್ಮಾ ಮಸೀದಿ ಸರಾಪ್ ಬಜಾರ್. ಟಾಂಗೂಕೋಟ್. ಮಹೇಂದ್ರ ಕರ್ ಸರ್ಕಲ್ ಮಾರ್ಗವಾಗಿ ಗಾಂಧಿ ಸರ್ಕಲ್ ದಲ್ಲಿ ಮಾನವ ಸರಪಳಿ ನಿರ್ಮಿಸಿ. ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.
25th June 2025
ಮನುಷ್ಯನ ಜೀವನ ಅತ್ಯಮೂಲ್ಯವಾಗಿದ್ದು ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ಜೀವನವೇ ಹಾಳಾಗುತ್ತದೆ. ಇದು ಕೇವಲ ವ್ಯಕ್ತಿ, ಕುಟುಂಬ ಸಮಾಜಕ್ಕಷ್ಟೇ ಅಲ್ಲದೇ ಇಡೀ ಮನುಕುಲದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಆದ್ದರಿಂದ ಯಾರೊಬ್ಬರೂ ಮಾದಕ ವಸ್ತುಗಳ ಮೋಹಕ್ಕೆ ಸಿಲುಕಬಾರದು ಎಂದು ತಹಸೀಲ್ದಾರ್ ವಾಸುದೇವ ವಿ ಸ್ವಾಮಿ ಹೇಳಿದರು.
ಅವರು ಮಂಗಳವಾರ ಲಕ್ಷ್ಮೇಶ್ವರ ಪೊಲೀಸ್ ಠಾಣಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ನಿಮಿತ್ತ ಬೈಕ್ ರ್ಯಾಲಿ ಮೂಲಕ ಹಮ್ಮಿಕೊಳ್ಳಲಾದ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿ, ಮಾದಕ ವಸ್ತುಗಳಿಂದ ಸಮಾಜ ಮುಕ್ತವಾಗಿರಬೇಕು. ಜೂನ್
೨೬ ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ಆಚರಿಸಲಾಗುತ್ತದೆ ಎಂದರು.
ಸಿಪಿಐ ನಾಗರಾಜ ಮಾಡಳ್ಳಿ ಮಾತನಾಡಿ, ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಎಂದು ಗೊತ್ತಿದ್ದರೂ ಮಾದಕ ವಸ್ತುಗಳ ದುಶ್ಚಟಗಳಿಗೆ ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಯುವಕರು ಕುಡಿತ, ಗುಟ್ಕಾ, ಗಾಂಜಾ, ಅಫೀಮು ಇತ್ಯಾದಿಗಳಿಂದ ದೂರವಿರಬೇಕು. ದುಶ್ಚಟಗಳಿಗೆ ಬಲಿಯಾಗಿ ಆರೋಗ್ಯ, ಸಮಯ ಹಾಳು ಮಾಡಿಕೊಳ್ಳುವ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾನೂನಿನ ಹೊರತಾಗಿಯೂ ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ. ಅದೇ ರೀತಿ ಪ್ರತಿಯೊಬ್ಬಬೈಕ್ ಸವಾರ ಹೆಲ್ಮೆಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಎಂದು ಹೇಳಿದರು.
ಪೊಲೀಸ್ ಠಾಣೆಯಿಂದ ಪ್ರಾರಂಭವಾದ ಬೈಕ್ ರ್ಯಾಲಿ ಪಟ್ಟಣದ ಮುಖ್ಯ ಬಜಾರ್ ರಸ್ತೆ ಮೂಲಕ ಸಾಗಿ ಪಂಪ ವೃತ್ತ, ಕೋರ್ಟ್ ಸರ್ಕಲ್, ಆಸಾರ ಓಣಿ, ವಿದ್ಯಾರಣ್ಯ ಸರ್ಕಲ್, ಶಿಗ್ಲಿ ನಾಕಾ, ಗದಗ ನಾಕಾ, ಬಸ್ ನಿಲ್ದಾಣ ಪ್ರಮುಖ ಮಾರ್ಗದಲ್ಲಿ ಸಂಚರಿಸಿತು.
ಬೈಕ್ ರ್ಯಾಲಿಯಲ್ಲಿ ತಾಪಂ ಇಓ ಕೃಷ್ಣಪ್ಪ ಧರ್ಮರ,ಪುರಸಭೆ ಮುಖ್ಯಾದಿಕಾರಿ ಮಹೇಶ ಹಡಪದ,ಪಿಎಸ್ಐ ನಾಗರಾಜ ಗಡಾದ, ಕ್ರೈಂ ಪಿಎಸ್ಐ ಟಿ.ಕೆ ರಾಠೋಡ, ಎ ಎಸ್ ಐ ಗಳಾದ ಎಸ್.ಎಸ್ ಮಕಾಂದಾರ, ಎ,ಎನ್ ಮೌಲ್ವಿ, ವೈ.ಸಿ ದೊಡ್ಡಮನಿ ಸೇರಿ ಪೊಲೀಸರು ಭಾಗವಹಿಸಿದ್ದರು.
ವರದಿ: ವೀರೇಶ್ ಗುಗರಿ
10th December 2024
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.
ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನ
7th December 2024
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ
ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ
ಗದಗ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ನಗರಸಭೆಯ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಶನಿವಾರ ಮಾಲಾರ್ಪಣೆ ಮಾಡಲಾಯಿತು.
ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷರು, ಗದಗ ವಿಧಾನಸಭಾ ಮತಕ್ಷೇತ್ರದ ಮಾಜಿ ಶಾಸಕ ಡಿ.ಆರ್. ಪಾಟೀಲ ಅವರು ಮಾಲಾರ್ಪಣೆ ಮಾಡಿದರು.
ಗದಗ ಜಿಲ್ಲಾ ಪರಿಶಿಷ್ಟ ಜಾತಿ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಬಸವರಾಜ ಕಡೆಮನಿ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಮಾರ್ತಾಂಡಪ್ಪ ಹಾದಿಮನಿ, ವಿನಾಯಕ ಬಳ್ಳಾರಿ, ವಿದ್ಯಾಧರ ದೊಡ್ಡಮನಿ, ಶಂಭು ಕಾಳೆ, ಶಿವು ಬಳ್ಳಾರಿ, ಉಮರ್ಫಾರೂಖ್ ಹುಬ್ಬಳ್ಳಿ, ಅನ್ವರ ಶಿರಹಟ್ಟಿ, ಮಹಮ್ಮದ್ ಶಾಲಗಾರ, ಶ್ರೀಕಾಂತ ಮಳಲಿ, ಎಚ್.ಕೆ. ಅಕ್ಕಿ, ಕೆ.ಎಚ್. ಬೆಲೂರ, ಬಾಲರಾಜ ಅರಬರ, ಶಾರುಖ್ ಹುಯಿಲಗೋಳ, ಅನಿಲ ಗರಗ, ಶಂಭು ಹುನಗುಂದ, ಮಹಮ್ಮದಸಾಬ್ ಬೆಟಗೇರಿ, ರಮೇಶ ರೋಣದ ಹಾಗೂ ಸೇರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
7th December 2024
*ಬಾಣಂತಿ ಸಾವು: ಬಳ್ಳಾರಿ ಆಸ್ಪತ್ರೆಯಲ್ಲಿ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಪರಿಶೀಲನೆ: ತಪ್ಪಿತಸ್ಥರ ವಿರುದ್ಧ ಕ್ರಮ*
*ಸಮಿತಿ ವರದಿ ಬಂದ ನಂತರ ಸೂಕ್ತ ಕ್ರಮ*:ಮುಖ್ಯಮಂತ್ರಿ ಸಿದ್ದರಾಮಯ್ಯ*
ಚಾಮರಾಜನಗರ, ಡಿಸೆಂಬರ್ 07: ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದರು.
*ತಪ್ಪಿತಸ್ಥರ ಮೇಲೆ ಕ್ರಮ*
ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.