

25th September 2025

ಚಿಕ್ಕ ಜಾಜೂರು : ಚಿಕ್ಕ ಜಾಜೂರು ಯೋಜನಾ ಕಛೇರಿ ವ್ಯಾಪ್ತಿಯ ತಾಳಿಕಟ್ಟೆ ಗ್ರಾಮದ ಶ್ರೀ ಬೀರಲಿಂಗೇಶ್ವರ ವಿದ್ಯಾಸಂಸ್ಥೆ ಮೂಲಕ ನಿರ್ಮಾಣ ಆಗುತ್ತಿರುವ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 200000 ರೂಪಾಯಿಯ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು. ಮಂಜೂರಾತಿ ಪತ್ರವನ್ನು ಕ್ಷೇತ್ರ ಯೋಜನಾಧಿಕಾರಿ ವಸಂತ್ ಎಸ್ ವಿತರಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪರಮ ಪೂಜ್ಯರು ಮಂಜೂರು ಮಾಡಿರುವ ಅನುದಾನದಿಂದ ಬಾಕಿ ಉಳಿದಿರುವ ಕಾಮಗಾರಿಯನ್ನು ಅದಷ್ಟು ಬೇಗ ಮುಗಿಸಿ, ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ವಿನಂತಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಸಮಿತಿ ಅಧ್ಯಕ್ಷರು,ಸದಸ್ಯರು, ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿದಿಗಳು, ಒಕ್ಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗಾಲಿ ಲಕ್ಷ್ಮೀ ಅರುಣ ಜನ್ಮದಿನ: ಅನುಗ್ರಹ ಆಶ್ರಮದಲ್ಲಿ ಅನ್ನದಾನ, ಮಕ್ಕಳಿಗೆ ಸಿಹಿ ಹಂಚಿ ಸಂಭ್ರಮ