

28th September 2025

ಹೊಳಲ್ಕೆರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಸಮೀಕ್ಷಾ ಕಾರ್ಯದ ವಿಶೇಷ ಶಿಭಿರವನ್ನು ಹೊಳಲ್ಕೆರೆ ತಾಲ್ಲೂಕಿನ ಆಡನೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯ ಅರೇನಹಳ್ಳಿ ಗ್ರಾಮದಲ್ಲಿ ಭಾನುವಾರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾಧಿಕಾರಿಗಳಾದ ಪುಪ್ಪ ಲತಾ ಮಾತನಾಡಿ ನೆಟ್ ವರ್ಕ್ ಹಾಗೂ ವಿದ್ಯುತ್ ಸಂಪರ್ಕ ಇಲ್ಲದಂತಹ ಏರಿಯಾಗಳ ಜನರನ್ನು ಶಾಡೋ ಏರಿಯಾದಲ್ಲಿ ಸೇರಿಸಿ ಅವರನ್ನು ಸಮೀಕ್ಷೆ ಮಾಡಲಾಗುತ್ತಿದ್ದು. ಜನರುಗಳು ಸಂಪೂರ್ಣ ಸಹಕಾರ ನೀಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕೊರಲಗುಂದಿ ವಿಜಯಕುಮಾರ್, ಬಿಸಿಎಂ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಪ್ರದೀಪ್, ಬಿ ಆರ್ ಸಿ ಸುರೇಂದ್ರನಾಥ್, ಪತ್ರಕರ್ತರು ಆದ ಚಿತ್ತಪ್ಪ, ಗ್ರಾಮಲೆಕ್ಕಾಧಿಕಾರಿಗಳು ಹಾಗೂ ಸಮೀಕ್ಷಾದಾರರು. ಜನರುಗಳು ಇದ್ದರು.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ