

14th December 2025

ಬಳ್ಳಾರಿ : ಬಳ್ಳಾರಿ ನಗರದ ಮಾರ್ಕೆಟ್ ಪ್ರದೇಶದ ತೇರು ಬೀದಿ (ಬ್ರಾಹ್ಮಣ ಸ್ಟ್ರೀಟ್)ಯಲ್ಲಿ ತಡರಾತ್ರಿ ಕಳ್ಳತನ ನಡೆದಿರುವ ಘಟನೆ ವರದಿಯಾಗಿದೆ. ಹೆಸರಾಂತ ರಾಮರಾಜ ಕಾಟನ್ ಅಂಗಡಿ, ಮುಕುಂದ ಕಾಟನ್, ಮೈಸೂರ್ ಸ್ಟುಡಿಯೋ, ಓಂ ಗಾಯತ್ರಿ ಸೇರಿದಂತೆ ಹಲವು ಬಟ್ಟೆ ಅಂಗಡಿಗಳನ್ನು ಗುರಿಯಾಗಿಸಿಕೊಂಡ ಕಳ್ಳರು, ಮಹಡಿಯ ಮೇಲ್ಭಾಗದಿಂದ ಕೆಳಗೆ ಇಳಿದು ಕೃತ್ಯ ಎಸಗಿದ್ದಾರೆ.
ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮೆರಾಗಳ ಡಿವಿಆರ್ ಯಂತ್ರ ಹಾಗೂ ನಗದು ಹಣವನ್ನು ಕಳವು ಮಾಡಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಸಿಸಿ ಟಿವಿ ಡಿವಿಆರ್ನ್ನೇ ಕಳವು ಮಾಡಿರುವುದರಿಂದ ಆರೋಪಿಗಳ ಪತ್ತೆಗೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಅಂಗಡಿಗಳ ಸಿಸಿ ಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ.
ಈ ಕುರಿತು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ತನಿಖೆ ಮುಂದುವರಿದಿದೆ. ನಗರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳಿಂದ ವ್ಯಾಪಾರಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ರಾತ್ರಿ ಸಮಯದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
-

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ