

24th March 2026

ಹೊಳಲ್ಕೆರೆ, ಮಾ.24: ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್. ಶಿವಪ್ರಕಾಶ್ ಅವರು ಇಂದು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಂದಾಯ ವಸೂಲಾತಿ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುತ್ತಿರುವ ವಸೂಲಾತಿ ಕಾರ್ಯಗಳ ಕುರಿತು ಮಾಹಿತಿ ಪಡೆದು, ಬಾಕಿ ಇರುವ ಕಂದಾಯವನ್ನು ಶೀಘ್ರ ವಸೂಲಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು.
ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಆಕಾಶ್ ಎಸ್ ಅವರ ಆದೇಶದಂತೆ ಮಾರ್ಚ್ 21ರಿಂದ 31ರವರೆಗೆ ಜಿಲ್ಲೆಯಾದ್ಯಂತ ಕಂದಾಯ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಪ್ರಣವಾನಂದ ಶ್ರೀಗಳ ಹೇಳಿಕೆಗೆ ರೆಡ್ಡಿ ಶ್ರೀನಿವಾಸ ಆಕ್ರೋಶ- ಸಚಿವ ತಂಗಡಿವರಿಂದ ಅನ್ಯಾಯವಾಗಿಲ್ಲ-ಸಚಿವರ ಮನೆ ಮುಂದೆ ಪ್ರತಿಭಟನೆ ನಿರ್ಧಾರಕ್ಕೆ ಖಂಡನೆ