

2nd May 2026

ಬಳ್ಳಾರಿ, ಮೇ.02 : ರಾಜ್ಯ ಸರ್ಕಾರವು 2026-27ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ (ಜಿ.ಬಿ.ಎ ಹೊರತುಪಡಿಸಿ) ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿದ್ದ ಶೇ.5 ರ ರಿಯಾಯಿತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಪೌರನಿಗಮಗಳ ಅಧಿನಿಯಮ 1976ರ ಪ್ರಕರಣ 112(2)ರನ್ವಯ, ಆರ್ಥಿಕ ವರ್ಷದ ಆರಂಭದ ಮೊದಲ 30 ದಿನಗಳಲ್ಲಿ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸಿದರೆ ಶೇ.5 ರಿಯಾಯಿತಿ ನೀಡುವ ಅವಕಾಶ ಇರುತ್ತದೆ.
ಈ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು, ತೆರಿಗೆ ಪಾವತಿಗೆ ನಾಗರಿಕರನ್ನು ಉತ್ತೇಜಿಸುವುದು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ, ಈ ರಿಯಾಯಿತಿ ಅವಧಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ವಿಸ್ತರಿಸುವ ನಿರ್ಧಾರ ಕೈಗೊಂಡಿದೆ.
ಅದನ್ವಯ, 2026-27ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸುವ ತೆರಿಗೆದಾರರಿಗೆ ನೀಡಲಾಗುವ ಶೇ.5 ರ ರಿಯಾಯಿತಿ ಪಡೆಯುವ ಅವಧಿಯನ್ನು ಮೇ 31, 2026ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರು ಪತ್ರಿಕಾ ಪ್ರಕಟಣೆ ನೀಡಿದ್ದು, ನಾಗರಿಕರು ಈ ಸೌಲಭ್ಯವನ್ನು ಬಳಸಿಕೊಂಡು ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸುವಂತೆ ಮನವಿ ಮಾಡಿದ್ದಾರೆ.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ