

13th May 2026

ಬಳ್ಳಾರಿ, ಮೇ.13: ನಗರದ 21ನೇ ವಾರ್ಡಿನ ಸಿದ್ಧಾರ್ಥ ನಗರ ಪ್ರದೇಶದ ಜನರ ಸಮಸ್ಯೆಗಳನ್ನು ಆಲಿಸಿದ ಶಾಸಕ ನಾರಾ ಭರತ್ ರೆಡ್ಡಿ ಅವರು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಸಿದ್ಧಾರ್ಥ ನಗರದ ಕಾಲುವೆ ಸಮೀಪದ ಜನವಸತಿ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ನಾರಾ ಭರತ್ ರೆಡ್ಡಿ, ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.
ಈ ವೇಳೆ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಕಂಬಗಳಿಗೆ ಸಂಪರ್ಕ ಕಲ್ಪಿಸುವುದು, ಬೀದಿ ದೀಪಗಳ ಅಳವಡಿಕೆ ಹಾಗೂ ನೈರ್ಮಲ್ಯ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರದೇಶದ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಚಾನಾಳ್ ಶೇಖರ್, ಪಂಪಯ್ಯ ಹಿರೇಮಠ್, ಸೋಮಣ್ಣ, ಪರಶುರಾಮು, ವಿಜಯಲಕ್ಷ್ಮೀ, ಶೇಖರ್, ಶಾಮ್, ವಾಣಿ, ಪಂಪಣ್ಣ, ಪರುಶುರಾಮುಡು, ಹೊನ್ನಪ್ಪ ಹಾಗೂ ಅಧಿಕಾರಿಗಳಾದ ವೀರೇಶ್, ಶಿವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕೊಪ್ಪಳದಲ್ಲಿ ಹತ್ತು ದಿನಗಳ ಮಾವು ಮೇಳೆಕ್ಕೆ ಚಾಲನೆ: 200 ತಳಿಯ ಮಾವಿನ ಹಣ್ಣುಗಳ ಪ್ರದರ್ಶನ- 1 ಕೆಜಿಗೆ ರೂ.2.5ಲಕ್ಷ ಬೆಲೆಯ 'ಮೀಯಾ ಜಾಕಿ' ಮಾವು