

13th May 2026

ಬಳ್ಳಾರಿ: ನಗರದ ಮೆಕ್ಕಾ ಮಸೀದಿಗೆ ಬುಧವಾರ ಭೇಟಿ ನೀಡಿದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಮಸೀದಿಯ ಅಭಿವೃದ್ಧಿ ಕಾಮಗಾರಿಗಳಿಗೆ ತಮ್ಮ ವೈಯಕ್ತಿಕ ನಿಧಿಯಿಂದ ₹2.50 ಲಕ್ಷ ದೇಣಿಗೆ ನೀಡಿದರು.
ಈ ವೇಳೆ ಮಸೀದಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಮಾತನಾಡಿದ ಶಾಸಕ ಭರತ್ ರೆಡ್ಡಿ, ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಅಭಿಪ್ರಾಯಪಟ್ಟರು.
ಮಸೀದಿಯ ಅಭಿವೃದ್ಧಿ ಕಾರ್ಯಗಳು ಶೀಘ್ರ ಪೂರ್ಣಗೊಳ್ಳಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಪಾಲಿಕೆಯ ಸದಸ್ಯ ಕುಬೇರ, ವಾರ್ಡಿನ ಮುಖಂಡರಾದ ಪರಶುರಾಮುಡು, ದೇವಿನಗರ ಹೊನ್ನೂರಪ್ಪ, ಹೊನ್ನಪ್ಪ, ಅರ್ಷದ್, ಸಾದಿಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ