

14th May 2026

ಕುರುಡಿ: ಇಲ್ಲಿನ ಗುಡ್ ಶಫರ್ಡ್ ಶಾಲೆಯಲ್ಲಿ 2025-26ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭವು ಸಂಭ್ರಮ ಹಾಗೂ ಸಡಗರದಿಂದ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಯಚೂರಿನ ಡಿಡಿಪಿಐ ಕಚೇರಿಯ ಸೀನಿಯರ್ ಎಫ್ಡಿಎ ಸೈಯದ್ ಅಮ್ಜದ್ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಜೀವನದಲ್ಲಿ ಶಿಕ್ಷಣದ ಮಹತ್ವವನ್ನು ವಿವರಿಸಿದ ಅವರು, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮುಂದಿನ ಗುರಿಗಳನ್ನು ಸಾಧಿಸಬೇಕು ಎಂದು ಕರೆ ನೀಡಿದರು.
ಅತಿಥಿಗಳಾಗಿ ಭಾಗವಹಿಸಿದ್ದ ಸಿಆರ್ಪಿ ಕುರುಡಿ ಮತ್ತು ಗೋರ್ಕಲ್ ಕ್ಲಸ್ಟರ್ನ ವೆಂಕಟೇಶ್ವರ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ಸಮಾಜಕ್ಕೆ ಸೇವೆ ಸಲ್ಲಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ ವೃಂದ, ಸಿಬ್ಬಂದಿಗಳು ಹಾಗೂ ಪಾಲಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಿಸಿ ಗೌರವಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿದ್ಯಾರ್ಥಿಗಳ ವಿವಿಧ ಪ್ರತಿಭಾ ಪ್ರದರ್ಶನಗಳು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದವು.

ಹೆಲ್ಮೆಟ್ ಜಾಗೃತಿಗಾಗಿ ಬೈಕ್ ಸವಾರಿ ಮಾಡಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಹೆಲ್ಮೆಟ್ ಧರಿಸುವುದು ಕಡ್ಡಾಯ