

16th May 2026

ಬಳ್ಳಾರಿ, ಮೇ 16: ಬಳ್ಳಾರಿ ಜಿಲ್ಲಾ ಲಾರಿ ಮಾಲೀಕರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಚಲ್ಲಾ ಮಹೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಸಂಘದ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಎಲ್ಲ ಸದಸ್ಯರ ಸಹಮತದೊಂದಿಗೆ ಚಲ್ಲಾ ಮಹೇಶ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಇದೇ ವೇಳೆ ಜಿಲ್ಲಾ ಉಪಾಧ್ಯಕ್ಷರಾಗಿ ವೈ. ಶ್ರೀನಿವಾಸ್, ಕಾರ್ಯದರ್ಶಿಯಾಗಿ ನಾರಾಯಣಸ್ವಾಮಿ, ಖಜಾಂಚಿಯಾಗಿ ಜೆ.ಎಸ್. ರಮೇಶ್ ಬಾಬು ಹಾಗೂ ಲಕ್ಷ್ಮೀ ನಾರಾಯಣ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದು ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ.
ನೂತನ ಜಿಲ್ಲಾಧ್ಯಕ್ಷ ಚಲ್ಲಾ ಮಹೇಶ್ ಮಾತನಾಡಿ, ಡೀಸೆಲ್ ಬೆಲೆ ನಿರಂತರ ಏರಿಕೆಯಾಗುತ್ತಿರುವುದರಿಂದ ಲಾರಿ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಲಾರಿಗಳ ಬಾಡಿಗೆಯನ್ನು ಹೆಚ್ಚಿಸುವ ಅಗತ್ಯವಿದ್ದು, ಲಾರಿ ಮಾಲೀಕರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಸಂಘವನ್ನು ಎಲ್ಲರ ಸಹಕಾರದೊಂದಿಗೆ ಮತ್ತಷ್ಟು ಬಲಪಡಿಸುವುದರ ಜೊತೆಗೆ ಹೆಚ್ಚಿನ ಲಾರಿ ಮಾಲೀಕರನ್ನು ಸದಸ್ಯರನ್ನಾಗಿ ನೋಂದಣಿ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ್, ರಮೇಶ್ ಬಾಬು, ನಾರಾಯಣಸ್ವಾಮಿ, ಲಕ್ಷ್ಮೀ ನಾರಾಯಣ ಸೇರಿದಂತೆ ಲಾರಿ ಮಾಲೀಕರ ಸಂಘದ ಹಲವು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಜೀನ್ಸ್ ಪಾರ್ಕ್ ಭೂಸ್ವಾಧೀನದಲ್ಲಿ ರೈತರಿಗೆ ಅನ್ಯಾಯ: ಹೊನ್ನುರಸ್ವಾಮಿ ಕೆ.ಟಿ. ಆರೋಪ ನ್ಯಾಯಯುತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹ