

21st May 2026

ಬಳ್ಳಾರಿ, ಮೇ.21: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಳ್ಳಾರಿ ಜಿಲ್ಲಾ ಘಟಕದ 2026-31ನೇ ಸಾಲಿನ ಚುನಾವಣೆಯಲ್ಲಿ ಸಿ. ನಿಂಗಪ್ಪ ಅವರು ಮೂರನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದಲ್ಲಿ ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಗುಂಡಪ್ಪನವರ ನಾಗರಾಜ, ಉಪಾಧ್ಯಕ್ಷರಾಗಿ ಪರಶುರಾಮ ಚೌಕಳಿ ಹಾಗೂ ಶಾಂತಕುಮಾರಿ ಎಂ., ಖಜಾಂಚಿಯಾಗಿ ಬಸವನಗೌಡ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಏಸಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ನೂತನ ಜಿಲ್ಲಾಧ್ಯಕ್ಷ ಸಿ. ನಿಂಗಪ್ಪ, ಶಿಕ್ಷಕರ ಹಿತರಕ್ಷಣೆ, ಶಿಕ್ಷಣದ ಗುಣಮಟ್ಟ ಹೆಚ್ಚಳ ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.
ಇನ್ನೂ ಎರಡು ಸಂಘಟನಾ ಕಾರ್ಯದರ್ಶಿ ಹಾಗೂ ಎರಡು ಜಂಟಿ ಕಾರ್ಯದರ್ಶಿ ಹುದ್ದೆಗಳ ನೇಮಕವನ್ನು ಮುಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಶ್ರೀರಾಮರಂಗಾಪುರ ದಲಿತ ಕುಟುಂಬಗಳಿಗೆ ವಸತಿ ನಿವೇಶನಕ್ಕೆ ಆಗ್ರಹ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ

ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ವಾಗ್ದಾಳಿ “ಮೂರು ವರ್ಷದ ಸಾಧನೆ ಎಂದರೆ ನೂರು ಸುಳ್ಳಿನ ಸಮಾವೇಶ” ಆರೋಪ