

28th May 2026

ಬಳ್ಳಾರಿ, ಮೇ.27: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಹೊರ ಜಿಲ್ಲೆಗೆ ಸಾಗಣೆ ಮಾಡಲು ಯತ್ನಿಸುತ್ತಿದ್ದ ಜಾಲವನ್ನು ಕುರುಗೋಡು ಪೊಲೀಸರು ಭೇದಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿ ಹಾಗೂ ಲಾರಿಯನ್ನು ಜಪ್ತಿಪಡಿಸಿರುವ ಘಟನೆ ನಡೆದಿದೆ.
ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಬಾದನಹಟ್ಟಿ ಗ್ರಾಮದ ಸಮೀಪ ಯಲ್ಲಾಪುರ ರಸ್ತೆಯಲ್ಲಿರುವ ನಂದಿ ಲೇಔಟ್ನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಯರಿಸ್ವಾಮಿ @ ಯರ್ರಿಶಂಕರಗೌಡ ಹಾಗೂ ಉಮೇಶ @ ಉಮಾಶಂಕರ ಇಬ್ಬರು ಅಕ್ರಮವಾಗಿ ಪಡಿತರ ಅಕ್ಕಿ ಚೀಲಗಳನ್ನು ಸಂಗ್ರಹಿಸಿ ಮಾನ್ವಿ ಮೂಲದ ವೀರಭದ್ರ ಮತ್ತು ವಿನೋಧ ಅವರಿಗೆ ಸಾಗಣೆ ಮಾಡಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ.
ಈ ವೇಳೆ ಲಾರಿ ನಂ. ಕೆಎ-36 ಸಿ-5899 ರಲ್ಲಿ ಅಕ್ಕಿ ಚೀಲಗಳನ್ನು ಲೋಡ್ ಮಾಡಲಾಗುತ್ತಿತ್ತು.
ಖಚಿತ ಮಾಹಿತಿಯ ಮೇರೆಗೆ ಕುರುಗೋಡು ಪೊಲೀಸ್ ಠಾಣೆಯ ಪಿ.ಎಸ್.ಐ. ಸುಪ್ರೀತ್ ವಿ. ನೇತೃತ್ವದಲ್ಲಿ ಸಿಬ್ಬಂದಿಗಳಾದ ಶಿವರಾಯಪ್ಪ, ಪಕ್ಕೀರಪ್ಪ, ರಾಮಚಂದ್ರ ಹಾಗೂ ಆಹಾರ ನಿರೀಕ್ಷಕ ಮಲ್ಲಿಕಾರ್ಜುನ ಪಿ. ಅವರು ಜಂಟಿಯಾಗಿ ದಾಳಿ ನಡೆಸಿದರು.
ದಾಳಿಯಲ್ಲಿ ಸುಮಾರು ₹5,52,500 ಮೌಲ್ಯದ ಒಟ್ಟು 22.10 ಟನ್ ಪಡಿತರ ಅಕ್ಕಿ ಹಾಗೂ ₹10 ಲಕ್ಷ ಮೌಲ್ಯದ ಅಶೋಕ್ ಲೈಲ್ಯಾಂಡ್ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 124/2026 ಅಡಿಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಕಲಂ 3, 7 ಹಾಗೂ 6(ಎ) ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ