

1st June 2026

ಹುಟ್ಟುಹಬ್ಬವನ್ನು ಸಮಾಜಸೇವೆಯಾಗಿ ಆಚರಿಸಿದ ತಿಮ್ಮನಗೌಡ
ಬಳ್ಳಾರಿ, ಜೂನ್ 1: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಆಶ್ರಯದಲ್ಲಿ ರೈತ ಭವನದಲ್ಲಿ ನಡೆಯುತ್ತಿರುವ “ರೈತಣ್ಣನ ಊಟ ಯೋಜನೆ” ಅಡಿಯಲ್ಲಿ ಭಾನುವಾರ ಅನ್ನದಾತರಿಗೆ ವಿಶೇಷ ಸಿಹಿ ಖಾದ್ಯ ಸೇರಿದಂತೆ ಸಂಪೂರ್ಣ ಊಟದ ವ್ಯವಸ್ಥೆ ಮಾಡಲಾಯಿತು.
ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷರು ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಗುರ್ಹುಕುಂ ಸಮಿತಿ ಅಧ್ಯಕ್ಷರಾಗಿರುವ ಹೆಚ್. ತಿಮ್ಮನಗೌಡ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಇಂದಿನ ಊಟದ ಸಂಪೂರ್ಣ ವೆಚ್ಚವನ್ನು ಭರಿಸಿ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು.
ಈ ಸಂದರ್ಭದಲ್ಲಿ ರೈತ ಭವನಕ್ಕೆ ಆಗಮಿಸಿದ್ದ ರೈತರು ಮತ್ತು ಸಾರ್ವಜನಿಕರು ತಿಮ್ಮನಗೌಡ ಅವರ ಸೇವಾ ಮನೋಭಾವವನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶ್ ಬಾಬು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ತಿಮ್ಮನಗೌಡ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.
ಅವರ ಸಾಮಾಜಿಕ ಸೇವಾ ಕಾರ್ಯಗಳು ಇನ್ನಷ್ಟು ವಿಸ್ತರಿಸಿ ಸಮಾಜಕ್ಕೆ ಮಾದರಿಯಾಗಲಿ ಎಂದು ಹಾರೈಸಿದರು.
ಪ್ರತಿದಿನ ನೂರಾರು ರೈತರಿಗೆ ಉಚಿತ ಹಾಗೂ ಗುಣಮಟ್ಟದ ಆಹಾರವನ್ನು ಒದಗಿಸುತ್ತಿರುವ ರೈತಣ್ಣನ ಊಟ ಯೋಜನೆಗೆ ವಿವಿಧ ದಾನಿಗಳು, ಸಮಾಜಸೇವಕರು ಹಾಗೂ ಸಂಘ-ಸಂಸ್ಥೆಗಳ ಸಹಕಾರ ನಿರಂತರವಾಗಿ ದೊರೆಯುತ್ತಿದ್ದು, ಯೋಜನೆ ಯಶಸ್ವಿಯಾಗಿ ಸಾಗುತ್ತಿದೆ.

ಹೊರನಾಡ ಕನ್ನಡ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಕಲ್ಪಿಸಲು ಒತ್ತಾಯ ಆಂಧ್ರ ದೇಶ ಕನ್ನಡ ಶಿಕ್ಷಕರ ಸಂಘದಿಂದ ಸರ್ಕಾರಕ್ಕೆ ಮನವಿ

ಕಾಂಗ್ರೆಸ್ನಲ್ಲಿ ಮಾದಿಗರಿಗೆ ಡಿಸಿಎಂ ಸ್ಥಾನ ಬೇಡಿಕೆ ಜೋರು ಹೈಕಮಾಂಡ್ ಮಟ್ಟದಲ್ಲಿ ಸಾಮಾಜಿಕ ಸಮತೋಲನ ಚರ್ಚೆ