

1st June 2026

ಹೊಳಲ್ಕೆರೆ, ಜೂ.1: ಪಟ್ಟಣದ ಪತ್ರಕರ್ತರ ಭವನದಲ್ಲಿ ಪತ್ರಕರ್ತರಾದ ಸುರೇಶ್ ಹಾಗೂ ನಾಗರಾಜ್ ಅವರ ಜನ್ಮದಿನವನ್ನು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಪತ್ರಕರ್ತರು ಭಾಗವಹಿಸಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದರು. ಇದೇ ವೇಳೆ ಸುರೇಶ್ ಮತ್ತು ನಾಗರಾಜ್ ಅವರಿಗೆ ಶುಭಾಶಯಗಳನ್ನು ತಿಳಿಸಿ, ಅವರ ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ಹಾಗೂ ಸಮಾಜಮುಖಿ ಸೇವೆ ಸಲ್ಲಿಸುವಂತಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಎಸ್. ವೇದಮೂರ್ತಿ, ದುಮ್ಮಿ ಚಿತ್ತಪ್ಪ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ಶುಭಾಶಯ ಕೋರಿದರು. ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಮಾಜಸೇವಕರು ಹಾಗೂ ಸ್ನೇಹಿತರು ಭಾಗವಹಿಸಿ ಜನ್ಮದಿನದ ಸಂಭ್ರಮಕ್ಕೆ ಮೆರುಗು ನೀಡಿದರು.
ಈ ವೇಳೆ ಜನ್ಮದಿನ ಆಚರಣೆಯು ಆತ್ಮೀಯ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು.

ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

ಮನೆಕಳ್ಳತನ ಪ್ರಕರಣ ಭೇದಿಸಿದ ಕೌಲ್ಬಜಾರ್ ಪೊಲೀಸರು; ₹16.80 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ