

5th June 2026

ಹೊಳಲ್ಕೆರೆ, ಜೂ.5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್ ಎಸ್. ಸಸಿ ನೆಟ್ಟು, ಪರಿಸರ ಸಂರಕ್ಷಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿ ಮಾತನಾಡಿದರು.
"ಹೆಚ್ಚಿನ ಸಂಖ್ಯೆಯಲ್ಲಿ ಗಿಡಮರಗಳನ್ನು ಬೆಳೆಸೋಣ. ಮನೆಗೊಂದು ಮಗು, ಮಗುವಿಗೊಂದು ನೆರಳು ಎಂಬ ಧ್ಯೇಯದೊಂದಿಗೆ ಪ್ರತಿಯೊಂದು ಮನೆ ಮುಂದೆ ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸಬೇಕು. ಪರಿಸರವನ್ನು ರಕ್ಷಿಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ" ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಸುರೇಶ್, ಪ್ರಥಮ ದರ್ಜೆ ಸಹಾಯಕ ತಿಮ್ಮಪ್ಪ, ಸಿಬ್ಬಂದಿಗಳಾದ ವಿನಯ್ ಕುಮಾರ್, ವಸತಿ ನೋಡಲ್ ಅಧಿಕಾರಿ ಪ್ರವೀಣ್ ಕುಮಾರ್, ಅರುಣ್ ಕುಮಾರ್ ನಾಯಕ್, ಗಿರಿಧರ್ ಸೇರಿದಂತೆ ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ನಿರ್ಮಾಣದ ಮಹತ್ವವನ್ನು ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

ಮನೆಕಳ್ಳತನ ಪ್ರಕರಣ ಭೇದಿಸಿದ ಕೌಲ್ಬಜಾರ್ ಪೊಲೀಸರು; ₹16.80 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ