

5th June 2026

ಹೊಳಲ್ಕೆರೆ, ಜೂ. 5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೊಳಲ್ಕೆರೆ ಪಟ್ಟಣದ ಪುರಸಭೆ ವತಿಯಿಂದ ನಗರ ದೇವತೆ ಶ್ರೀ ಕುಕಡೇಶ್ವರಿ ಅಮ್ಮನವರ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪುರಸಭೆ ಮುಖ್ಯಾಧಿಕಾರಿ ಉಮೇಶ್ ಅವರು ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಗಿಡಮರಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆಯ ಆರೋಗ್ಯ ನಿರೀಕ್ಷಕಿ ಕಲ್ಪನಾ, ಲೆಕ್ಕಾಧಿಕಾರಿ ಮಹೇಶ್, ಸಿಬ್ಬಂದಿಗಳಾದ ನೌಶಾದ್, ಪ್ರಶಾಂತ್, ನಾಗಭೂಷಣ್ ಸೇರಿದಂತೆ ಪುರಸಭೆ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿದರು.
ವಿಶ್ವ ಪರಿಸರ ದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.
– ವರದಿ: ನಾಗರಾಜ್ ಕೆ

ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

ಮನೆಕಳ್ಳತನ ಪ್ರಕರಣ ಭೇದಿಸಿದ ಕೌಲ್ಬಜಾರ್ ಪೊಲೀಸರು; ₹16.80 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ