

6th June 2026

ಹೊಳಲ್ಕೆರೆ, ಜೂ. 6: ಪಟ್ಟಣದ ಪುರಸಭೆ ವ್ಯಾಪ್ತಿಯ ಡಿವೈಡರ್ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ಗುಂಡಿ ಬಿದ್ದಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪುರಸಭೆ ಮುಖ್ಯಾಧಿಕಾರಿಗಳ ಗಮನಕ್ಕೆ ತಂದ ತಕ್ಷಣವೇ ಕ್ರಮ ಕೈಗೊಳ್ಳಲಾಯಿತು.
ಪುರಸಭೆ ಮುಖ್ಯಾಧಿಕಾರಿ ಉಮೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪೌರಕಾರ್ಮಿಕರನ್ನು ಕರೆದುಕೊಂಡು ಗುಂಡಿಯನ್ನು ತಕ್ಷಣವೇ ಮುಚ್ಚುವ ಕಾರ್ಯಕ್ಕೆ ಚಾಲನೆ ನೀಡಿದರು. ಹಲವು ದಿನಗಳಿಂದ ಈ ಗುಂಡಿಯಿಂದ ಸಾರ್ವಜನಿಕರಿಗೆ ಸಂಚಾರದಲ್ಲಿ ತೊಂದರೆಯಾಗುತ್ತಿದ್ದು, ಕೆಲವರು ಬಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಬಗ್ಗೆ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಈ ಕುರಿತು ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಉಮೇಶ್ ಅವರು, “ಸಾರ್ವಜನಿಕರು ಸಮಸ್ಯೆಯನ್ನು ನಮ್ಮ ಗಮನಕ್ಕೆ ತಂದ ಕೂಡಲೇ ಸ್ಥಳ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಪಘಾತಗಳಿಗೆ ಕಾರಣವಾಗಿದ್ದ ಗುಂಡಿಯನ್ನು ಮುಚ್ಚಲಾಗಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ” ಎಂದು ತಿಳಿಸಿದರು.
ಪುರಸಭೆಯ ತ್ವರಿತ ಕಾರ್ಯಾಚರಣೆಯಿಂದ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಸಂತಸ ವ್ಯಕ್ತಪಡಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಆದ್ಯತೆ ನೀಡಿ ಕೂಡಲೇ ಸ್ಪಂದಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಪುರಸಭೆಯ ದ್ವಿತೀಯ ದರ್ಜೆ ಸಹಾಯಕ ನೌಷಾದ್, ಪೌರಕಾರ್ಮಿಕರು ಹಾಗೂ ಇತರ ಸಿಬ್ಬಂದಿ ಕಾರ್ಯದಲ್ಲಿ ಭಾಗವಹಿಸಿದ್ದರು.

ಕೋಟ್ಯಂತರ ರೂ. ಮೌಲ್ಯದ ಆಸ್ತಿ ಸರ್ಕಾರದ ಸುಪರ್ದಿಗೆ ಮೆಸೋನಿಕ್ ಹಾಲ್ ಜಮೀನು ಜಿಲ್ಲಾಡಳಿತ ವಶಕ್ಕೆ

ಅಹಿಂದ ಕೇವಲ ರಾಜಕೀಯ ಘೋಷಣೆಯಾಗಬಾರದು; ಅದು ಸಮಾಜ ಪರಿವರ್ತನೆಯ ಮಹಾ ಚಳವಳಿಯಾಗಬೇಕು – ಹೊನ್ನುರಸ್ವಾಮಿ ಕೆ.ಟಿ