

6th June 2026

ಹೊಳಲ್ಕೆರೆ, ಜೂ. 6: ಘನ ತ್ಯಾಜ್ಯ ವಿಲೇವಾರಿ ಹಾಗೂ ಸ್ವಚ್ಛತಾ ಯಂತ್ರೋಪಕರಣಗಳ ಸಮರ್ಪಕ ನಿರ್ವಹಣೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಹೊಳಲ್ಕೆರೆ ಪುರಸಭೆ ವತಿಯಿಂದ ಪೌರಕಾರ್ಮಿಕರಿಗೆ ಒಂದು ದಿನದ ಅಧ್ಯಯನ ಪ್ರವಾಸವನ್ನು ಆಯೋಜಿಸಲಾಯಿತು.
ರಾಜ್ಯ ಸರ್ಕಾರದ ಸುತ್ತೋಲೆ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗದ ಸ್ವಚ್ಛ ಭಾರತ ಅಭಿಯಾನದ ಮಾರ್ಗಸೂಚಿಯಂತೆ ಈ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.
ಪುರಸಭೆಯ ಮುಖ್ಯಾಧಿಕಾರಿ ಉಮೇಶ್ ಅವರ ಮಾರ್ಗದರ್ಶನದ ಮೇರೆಗೆ ಪುರಸಭೆಯ ಆರೋಗ್ಯ ನಿರೀಕ್ಷಕರಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಜವಾಬ್ದಾರಿ ವಹಿಸಲಾಗಿತ್ತು.
ಅಧ್ಯಯನ ಪ್ರವಾಸದ ವೇಳೆ ಪೌರಕಾರ್ಮಿಕರು ಘನ ತ್ಯಾಜ್ಯ ವಿಲೇವಾರಿ ವಿಧಾನಗಳು, ತ್ಯಾಜ್ಯ ವಿಂಗಡಣೆ, ಸ್ವಚ್ಛತಾ ಕಾರ್ಯಗಳಲ್ಲಿ ಬಳಸುವ ಯಂತ್ರೋಪಕರಣಗಳ ನಿರ್ವಹಣೆ ಹಾಗೂ ಸ್ವಚ್ಛತಾ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದ ಅನೇಕ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಹರೀಶ್ ಹಾಗೂ ಪುರಸಭೆಯ ಪೌರಕಾರ್ಮಿಕರು ಭಾಗವಹಿಸಿದ್ದರು.
ಅಧ್ಯಯನ ಪ್ರವಾಸದ ಬಳಿಕ ಮಾತನಾಡಿದ ಪೌರಕಾರ್ಮಿಕರು, “ಮುಂದಿನ ದಿನಗಳಲ್ಲಿ ನಮ್ಮ ವಾರ್ಡ್ಗಳು ಹಾಗೂ ಪಟ್ಟಣವನ್ನು ಇನ್ನಷ್ಟು ಸ್ವಚ್ಛವಾಗಿಡಲು ಶ್ರಮಿಸುತ್ತೇವೆ” ಎಂದು ತಿಳಿಸಿದರು.
ವರದಿ: ನಾಗರಾಜ್ ಕೆ.

ಕೋಟ್ಯಂತರ ರೂ. ಮೌಲ್ಯದ ಆಸ್ತಿ ಸರ್ಕಾರದ ಸುಪರ್ದಿಗೆ ಮೆಸೋನಿಕ್ ಹಾಲ್ ಜಮೀನು ಜಿಲ್ಲಾಡಳಿತ ವಶಕ್ಕೆ

ಅಹಿಂದ ಕೇವಲ ರಾಜಕೀಯ ಘೋಷಣೆಯಾಗಬಾರದು; ಅದು ಸಮಾಜ ಪರಿವರ್ತನೆಯ ಮಹಾ ಚಳವಳಿಯಾಗಬೇಕು – ಹೊನ್ನುರಸ್ವಾಮಿ ಕೆ.ಟಿ