

6th June 2026

ಬಳ್ಳಾರಿ,ಜೂ.06 : ನಗರದ ಪೋಲಾ ಹೋಟೆಲ್ ಎದುರಿನ ಮೆಸೋನಿಕ್ ಹಾಲ್ಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಜಿಲ್ಲಾಡಳಿತ ವಶಕ್ಕೆ ಪಡೆದುಕೊಂಡಿದೆ.
ಈ ಜಾಗದ ಕುರಿತು ಹಲವು ವರ್ಷಗಳಿಂದ ಆಡಳಿತಾತ್ಮಕ ಮತ್ತು ಕಾನೂನು ಪ್ರಕ್ರಿಯೆಗಳು ನಡೆಯುತ್ತಿದ್ದವು. ಸಂಬAಧಪಟ್ಟ ದಾಖಲೆಗಳು ಹಾಗೂ ಆದೇಶಗಳ ಆಧಾರದ ಮೇಲೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಾಗವನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಂಡರು.
ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಭದ್ರತೆಯೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಜಾಗವನ್ನು ವಶಕ್ಕೆ ಪಡೆದ ಬಳಿಕ ಸರ್ಕಾರದ ಸ್ವತ್ತಾಗಿದೆ ಎಂಬ ಫಲಕವನ್ನು ಅಳವಡಿಸಲಾಗಿದೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಮಾತನಾಡಿ, ಬಳ್ಳಾರಿಯ ಟಿ.ಎಸ್ ಸಂಖ್ಯೆ 102 ರಲ್ಲಿರುವ ಒಟ್ಟು 4 ಎಕರೆ 44 ಸೆಂಟ್ಸ್ ವಿಸ್ತೀರ್ಣದ ಜಾಗವನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಇಂದು ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರದ ಸುಪರ್ದಿಗೆ ಪಡೆದಿದ್ದಾರೆ.
ಈ ಜಮೀನು 1884 ರಿಂದಲೂ ಮೆಸೋನಿಕ್ ಹಾಲ್' ಹೆಸರಿನಲ್ಲಿ ಖಾಸಗಿಯವರ ಬಳಕೆಯಲ್ಲಿ ಇತ್ತು. ಆದರೆ, ಈ ಆಸ್ತಿಗೆ ಸಂಬAಧಿಸಿದAತೆ ನಿಯಮಾನುಸಾರ ಯಾವುದೇ ರೀತಿಯ ಸದುಪಯೋಗ ಅಥವಾ ಅಗತ್ಯ ನವೀಕರಣಗಳು ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಾಗವನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಇದನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಕಂದಾಯ ಇಲಾಖೆಗೆ ಮಹತ್ವದ ಆದೇಶ ಹೊರಡಿಸಿದ್ದರು.
ಜಿಲ್ಲಾಧಿಕಾರಿಗಳ ಖಡಕ್ ಆದೇಶದ ಬೆನ್ನಲ್ಲೇ ಅಧಿಕಾರಿಗಳ ತಂಡ, ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಕಾನೂನಾತ್ಮಕವಾಗಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದುಕೊಂಡಿದೆ ಎಂದು ಮಾಹಿತಿ ನೀಡಿದರು.
ಕಾರ್ಯಾಚರಣೆಯಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಡಿಡಿಎಲ್ಆರ್ ಪ್ರಮೋದ್, ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ, ಕಂದಾಯ ನಿರೀಕ್ಷಕರು, ಮಹಾನಗರಪಾಲಿಕೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.

ಅಹಿಂದ ಕೇವಲ ರಾಜಕೀಯ ಘೋಷಣೆಯಾಗಬಾರದು; ಅದು ಸಮಾಜ ಪರಿವರ್ತನೆಯ ಮಹಾ ಚಳವಳಿಯಾಗಬೇಕು – ಹೊನ್ನುರಸ್ವಾಮಿ ಕೆ.ಟಿ