

9th June 2026

ಬಳ್ಳಾರಿ, ಜೂ. 9: ನಗರದ ಅನಂತಪುರ ರಸ್ತೆಯಿಂದ ರಾಘವೇಂದ್ರ ಕಾಲೋನಿಗೆ ಸಂಪರ್ಕಿಸುವ ರಸ್ತೆಗೆ ಹಿರಿಯ ಸಮಾಜಸೇವಕ ಹಾಗೂ ಜನಾನುರಾಗಿ ವ್ಯಕ್ತಿತ್ವದ ಮುಂಡ್ಲೂರು ನರಸಿಂಹಪ್ಪ ಅವರ ಹೆಸರನ್ನು ನಾಮಕರಣ ಮಾಡಲಾಗಿದ್ದು, ರಸ್ತೆ ನಾಮಫಲಕವನ್ನು ನಗರ ಶಾಸಕ ನಾರಾ ಭರತ್ ರೆಡ್ಡಿ ಉದ್ಘಾಟಿಸಿದರು.
ಪಾಲಿಕೆ ಸದಸ್ಯ ಎಂ. ಪ್ರಭಂಜನಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಭರತ್ ರೆಡ್ಡಿ, ಸಮಾಜದ ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಮುಂಡ್ಲೂರು ನರಸಿಂಹಪ್ಪ ಅವರ ಸೇವೆ ಚಿರಸ್ಮರಣೀಯವಾಗಿದೆ ಎಂದು ಹೇಳಿದರು.
ಸಮಾಜದ ಎಲ್ಲ ವರ್ಗಗಳೊಂದಿಗೆ ಬೆರೆತು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ನರಸಿಂಹಪ್ಪ ಅವರು ಜನರ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದರು. ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡಿರುವುದು ಅವರ ಸಾಮಾಜಿಕ ಸೇವೆಗೆ ಸಲ್ಲಿಸಿದ ಗೌರವವಾಗಿದೆ ಎಂದು ತಿಳಿಸಿದರು.
ನಗರದ ಅಭಿವೃದ್ಧಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಮುಂಡ್ಲೂರು ಕುಟುಂಬದ ಕೊಡುಗೆ ಗಮನಾರ್ಹವಾಗಿದೆ. ಇಂತಹ ಮಹನೀಯರ ಜೀವನ ಮತ್ತು ಆದರ್ಶಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿವೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷ ಕಟ್ಟೆಮನೆ ನಾಗೇಂದ್ರ, ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಪಾಲಿಕೆ ಸದಸ್ಯರಾದ ಇಬ್ರಹಿಂ ಬಾಬು, ನೂರ್ ಮೊಹಮ್ಮದ್, ನಾಜು, ಎನ್ಎಂಡಿ ಆಸೀಫ್ ಭಾಷಾ ಜಬ್ಬಾರ್, ರಾಮಾಂಜನೇಯ, ಕುಬೇರ, ಶ್ರೀನಿವಾಸ್ ಹಾಗೂ ಕಾಂಗ್ರೆಸ್ ಮುಖಂಡರಾದ ಅಯಾಜ್ ಅಹ್ಮದ್, ಜಗನ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಮುಂಡ್ಲೂರು ಕುಟುಂಬದ ಎಂ. ನಾರಾಯಣರಾವ್, ಎಂ. ಶ್ರೀಧರ್, ಎಂ. ನರೇಶ್, ನಳಿನಿ, ಎಂ. ರಾಘವೇಂದ್ರ, ಎಂ. ಅಂಜನಕುಮಾರ್, ಎಂ. ಕೃಷ್ಣಕುಮಾರ್, ಎಂ. ಪವನ್, ಎಂ. ವಿವೇಕ್, ಫಣೀಂದ್ರ, ರಾಮು, ದುರ್ಗಾಬಾಬು ಹಾಗೂ ಎಂ. ಜಯಸಿಂಹ ಸೇರಿದಂತೆ ಕುಟುಂಬ ಸದಸ್ಯರು, ಬಂಧುಗಳು ಮತ್ತು ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಂಡ್ಲೂರು ನರಸಿಂಹಪ್ಪ ಅವರ ಸಾಮಾಜಿಕ ಸೇವೆಗಳನ್ನು ಸ್ಮರಿಸಿ ಗೌರವ ನಮನ ಸಲ್ಲಿಸಲಾಯಿತು.

ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ಶವ ಪತ್ತೆ: ಕೊಲೆ, ಆತ್ಮಹತ್ಯೆ ಅಥವಾ ಅಪಘಾತವೇ? ಹಲವು ಅನುಮಾನಗಳಿಗೆ ಕಾರಣವಾದ ಘಟನೆ

ಗಂಗಾವತಿ: ಕ್ಷುಲ್ಲಕ ಜಗಳಕ್ಕೆ ಹೆತ್ತ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಪಾಪಿ ತಮ್ಮ!- ಆನ್ ಲೈನ್ ಗೇಮ್ ಬೆಡವೆಂದು ಬುದ್ದಿವಾದಕ್ಕೆ ಸಿಟ್ಟು

ಕೋಟ್ಯಂತರ ರೂ. ಮೌಲ್ಯದ ಆಸ್ತಿ ಸರ್ಕಾರದ ಸುಪರ್ದಿಗೆ ಮೆಸೋನಿಕ್ ಹಾಲ್ ಜಮೀನು ಜಿಲ್ಲಾಡಳಿತ ವಶಕ್ಕೆ