

15th June 2026

ಹೊಳಲ್ಕೆರೆ, ಜೂ.15: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಿರುವ ಬೀಜ, ರಸಗೊಬ್ಬರ ಹಾಗೂ ಕೃಷಿ ಸಂಬಂಧಿತ ಪೂರ್ವಸಿದ್ಧತೆಗಳ ಕುರಿತು ರೈತರ ಕುಂದುಕೊರತೆ ಸಭೆ ನಡೆಯಿತು.
ಜಿಲ್ಲಾಧಿಕಾರಿಗಳ ಆದೇಶದಂತೆ ನಡೆದ ಸಭೆಯಲ್ಲಿ ಜಿಲ್ಲಾ ಉಪ ವಿಭಾಗಾಧಿಕಾರಿ ಕಾಂತರಾಜ್ ಅಧ್ಯಕ್ಷತೆ ವಹಿಸಿ, ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕೃಷಿ ಇಲಾಖೆಯ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು.
ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಪೂರೈಕೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಕೃಷಿ ಇಲಾಖೆಯ ಅಧಿಕಾರಿಗಳಾದ ವಿಜಯ್ ಕೊರಲಗುಂಡಿ ವಿಜಯಕುಮಾರ್, ಸಹಾಯಕ ಕೃಷಿ ನಿರ್ದೇಶಕ ಚಂದ್ರಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವಿರುಪಾಕ್ಷಪ್ಪ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ರೈತ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು ಬೀಜ ಮತ್ತು ರಸಗೊಬ್ಬರ ಲಭ್ಯತೆ, ಬೆಲೆ ನಿಯಂತ್ರಣ, ಬೆಳೆ ವಿಮೆ, ನೀರಾವರಿ ಹಾಗೂ ಕೃಷಿ ಸಂಬಂಧಿತ ವಿವಿಧ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯ ಮತ್ತು ಮನವಿಗಳನ್ನು ಮಂಡಿಸಿದರು.
ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮುಂಗಾರು ಹಂಗಾಮಿನಲ್ಲಿ ರೈತರಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.

ಸೂರ್ಯ ನ್ಯೂಸ್ ಕನ್ನಡ ವಾರ್ಷಿಕೋತ್ಸವದಲ್ಲಿ ಹೊನ್ನುರಸ್ವಾಮಿ ಕೆ.ಟಿ. ಅವರಿಗೆ “ನಿರ್ಭೀತ ವರದಿಗಾರ ರತ್ನ” ಪ್ರಶಸ್ತಿ ಪ್ರದಾನ