

15th June 2026

ಬಳ್ಳಾರಿ, ಜೂ.15: ಬಳ್ಳಾರಿ ಮಹಾನಗರ ಪಾಲಿಕೆಯ 23ನೇ ವಾರ್ಡ್ ವ್ಯಾಪ್ತಿಯ ಕನ್ನಡ ನಗರ, ಅಂಬೇಡ್ಕರ್ ನಗರ, ಬೀಚಿನಗರ ಹಾಗೂ ಕಪ್ಪಗಲ್ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳನ್ನು ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಾಮಗಾರಿಗಳ ಪ್ರಗತಿ, ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ಅನುಕೂಲತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮೇಯರ್, ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವಂತೆ ಸೂಚನೆ ನೀಡಿದರು.
ಈ ವೇಳೆ 23ನೇ ವಾರ್ಡ್ನ ಕಾಂಗ್ರೆಸ್ ಮುಖಂಡರು, ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ವಾರ್ಡ್ನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮೇಯರ್ ಅವರೊಂದಿಗೆ ಚರ್ಚಿಸಿದರು.
ಸಾರ್ವಜನಿಕರ ಸಮಸ್ಯೆಗಳು ಮತ್ತು ಅಗತ್ಯಗಳ ಬಗ್ಗೆ ಮಾಹಿತಿ ಪಡೆದ ಮೇಯರ್, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸೂರ್ಯ ನ್ಯೂಸ್ ಕನ್ನಡ ವಾರ್ಷಿಕೋತ್ಸವದಲ್ಲಿ ಹೊನ್ನುರಸ್ವಾಮಿ ಕೆ.ಟಿ. ಅವರಿಗೆ “ನಿರ್ಭೀತ ವರದಿಗಾರ ರತ್ನ” ಪ್ರಶಸ್ತಿ ಪ್ರದಾನ