

17th June 2026

ಹೊಳಲ್ಕೆರೆ, ಜೂ.17: ಬೆಂಗಳೂರಿನಲ್ಲಿ ನಡೆಯಲಿರುವ ನೂತನ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭಕ್ಕೆ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾಜಿ ಶಾಸಕ ಎ.ವಿ. ಉಮಾಪತಿ ಕರೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಪಕ್ಷದ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಪಕ್ಷದ ಬಲವರ್ಧನೆ ಹಾಗೂ ಸಂಘಟನೆಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ವೈಶಾಖ್ ಯಾದವ್, ಸಣ್ಣ ಪಾಲೇಗೌಡ್ರು, ಅಶೋಕ್, ವಕೀಲ ವೇದಮೂರ್ತಿ, ರಂಗಸ್ವಾಮಿ, ವಿನಯ್ ಕುಮಾರ್ ಕೊಡಗಹಳ್ಳಿಹಟ್ಟಿ, ಡುಮ್ಮಿ ಚಿತ್ತಪ್ಪ ಯಾದವ್, ಸುರೇಶ್ ಅವನಟ್ಟಿ, ಚೇತನ್ ಕಣಿವೆಹಳ್ಳಿ, ಬಸವರಾಜ್ ಯಾದವ್ ಅಗ್ರಹಾರ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ನಾಗರಾಜ್ ಕೆ.