

21st June 2026

ಕಾರಟಗಿ, ಜೂ.21: ನಗರದ ಪ್ರತಿಷ್ಠಿತ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ನಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ 4ರಿಂದ 10ನೇ ತರಗತಿಯ ಸುಮಾರು 500 ವಿದ್ಯಾರ್ಥಿಗಳು ಏಕಕಾಲಕ್ಕೆ ವಿವಿಧ ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಯೋಗದ ಮಹತ್ವವನ್ನು ಸಾರಿದರು.
ವಿದ್ಯಾರ್ಥಿಗಳು ಶ್ರದ್ಧೆ ಹಾಗೂ ಉತ್ಸಾಹದಿಂದ ಯೋಗಾಭ್ಯಾಸದಲ್ಲಿ ಭಾಗವಹಿಸಿದ್ದು, ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಯೋಗದ ಅಗತ್ಯತೆಯ ಬಗ್ಗೆ ಅರಿವು ಮೂಡಿಸಲಾಯಿತು.
ಶಾಲೆಯಲ್ಲಿ ಯೋಗಾಭ್ಯಾಸವು ಕೇವಲ ಯೋಗ ದಿನಕ್ಕೆ ಸೀಮಿತವಾಗದೇ, ವಾರದಲ್ಲಿ ಎರಡು ದಿನಗಳ ಕಾಲ ನಿಯಮಿತವಾಗಿ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯಕರ ಜೀವನಶೈಲಿಯ ಭಾಗವಾಗಿ ರೂಪುಗೊಂಡಿದೆ.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯೆ ಮೇಘಾ ದಿವಟರ್ ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಯೋಗ ಪ್ರದರ್ಶನವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
ಯೋಗದ ಮೂಲಕ ಶಿಸ್ತು, ಏಕಾಗ್ರತೆ ಹಾಗೂ ಆರೋಗ್ಯವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಶ್ರೀ ಕ್ಷೇತ್ರ ಹುಲಿಗೇಮ್ಮ ದೇವಸ್ಥಾನ ಹುಂಡಿ ಎಣಿಕೆ 20 ದಿನದಲ್ಲಿ ರೂ.1.3 ಕೋಟಿ ಹಣ ಸಂಗ್ರಹ- 70 ಗ್ರಾಂ ಕಚ್ಚಾ ಬಂಗಾರ 3 ಕೆಜಿ ಬೆಳ್ಳಿ ದೇಣಿಗೆ