

22nd June 2026

ಹೊಳಲ್ಕೆರೆ, ಜೂ. 21: ತಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಎನ್ಆರ್ಇಜಿಎ) ಅಡಿಯಲ್ಲಿ ನಿರ್ಮಿಸಿರುವ ಅಮೃತ್ ಸರೋವರದ ದಂಡೆಯ ಮೇಲೆ ವಿಶ್ವ ಯೋಗ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರು ಹಾಗೂ ಮಕ್ಕಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡು ದಿನದ ಮಹತ್ವವನ್ನು ಅರಿತುಕೊಂಡರು.
ಈ ಸಂದರ್ಭದಲ್ಲಿ ಹೊಳಲ್ಕೆರೆ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್ ಎಸ್. ಮಾತನಾಡಿ, ಯೋಗವು ಭಾರತ ದೇಶವು ವಿಶ್ವಕ್ಕೆ ನೀಡಿರುವ ಅಮೂಲ್ಯ ಕೊಡುಗೆಯಾಗಿದೆ. ಯೋಗಾಭ್ಯಾಸದಿಂದ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಮನಸ್ಸನ್ನು ನಿಯಂತ್ರಿಸುವ ಶಕ್ತಿ ದೊರೆಯುತ್ತದೆ.
ವಿಶೇಷವಾಗಿ ಮಕ್ಕಳಿಗೆ ಯೋಗವು ವರದಾನವಾಗಿದ್ದು, ಸದೃಢ ದೇಹದಲ್ಲಿ ಸದೃಢ ಮನಸ್ಸು ನೆಲೆಸಿರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡು ಆರೋಗ್ಯಕರ ಜೀವನ ನಡೆಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶುಭ, ಬಿಎಫ್ಟಿ ಶಿವು, ಗ್ರಾಮ ಪಂಚಾಯಿತಿ ಸಿಬ್ಬಂದಿ, ತಾಲೂಕು ಐಇಸಿ ಸಂಯೋಜಕರು, ಗ್ರಾಮಸ್ಥರು ಹಾಗೂ ಇತರರು ಉಪಸ್ಥಿತರಿದ್ದರು.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ