

26th June 2026

ಸಂಡೂರು, ಜೂ. 26: ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳ ಸಂಸದ ಈ. ತುಕರಾಮ್ ಅವರ ಜನ್ಮದಿನದ ಅಂಗವಾಗಿ ಸಂಡೂರಿನಲ್ಲಿ ಶುಭಾಶಯ ಕಾರ್ಯಕ್ರಮ ನಡೆಯಿತು.
ಕೆಪಿಸಿಸಿ ರಾಜ್ಯ ಸಂಯೋಜಕರು (ಪ್ರಚಾರ ಸಮಿತಿ) ಹಾಗೂ ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರ ವೆಂಕಟೇಶ್ ಹೆಗಡೆ ಅವರು ಸಂಸದ ಈ. ತುಕರಾಮ್ ಅವರನ್ನು ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಭಗವಂತನು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ-ಶಾಂತಿ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿ ಮತ್ತು ಯಶಸ್ಸನ್ನು ಕರುಣಿಸಲಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ಅವರನ್ನು ವೆಂಕಟೇಶ್ ಹೆಗಡೆ ಅವರು ಸನ್ಮಾನಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿ, ಸಂಸದ ಈ. ತುಕರಾಮ್ ಅವರ ಸಾರ್ವಜನಿಕ ಸೇವೆಯನ್ನು ಶ್ಲಾಘಿಸಿ ಶುಭಾಶಯಗಳನ್ನು ತಿಳಿಸಿದರು. ಜನ್ಮದಿನದ ಅಂಗವಾಗಿ ಸಂಸದರ ಮುಂದಿನ ಜನಪರ ಕಾರ್ಯಗಳಿಗೆ ಯಶಸ್ಸು ಸಿಗಲೆಂದು ಹಾರೈಸಲಾಯಿತು.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ