

29th June 2026

ಬಳ್ಳಾರಿ, ಜೂ. 28: ನಗರದ ಡಾ. ಬಾಬು ಜಗಜೀವನ್ ರಾಮ್ ಭವನದಲ್ಲಿ ಭಾನುವಾರ ನಡೆದ ಬಳ್ಳಾರಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಹಿಮಂತ್ ರಾಜ್ ಬಿ. ಅವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಸಂಸ್ಥಾಪಕ ಅಧ್ಯಕ್ಷ ಮಹೇಶ್ ಕುರುವಳ್ಳಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಹೇಶ್ ಕುರುವಳ್ಳಿ, ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರ ಆಶಯಗಳು ಹಾಗೂ ಸಾಮಾಜಿಕ ನ್ಯಾಯದ ತತ್ವಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂಘಟನೆಯ ಮೂಲಕ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಎ.ಕೆ. ಈರಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ. ಹನುಮಂತ, ಉಮೇಶ್, ರಾಜ್ಯ ಯುವ ಘಟಕದ ಅಧ್ಯಕ್ಷ ಹೆಚ್. ಶಿವರಾಜ್, ರಾಜ್ಯ ಯುವ ಘಟಕದ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ವಕೀಲ ಮಲ್ಲಿಕಾರ್ಜುನ ಸೇರಿದಂತೆ ಹಲವರು ಉಪಸ್ಥಿತರಿದ್ದರು.
*ನೂತನ ಪದಾಧಿಕಾರಿಗಳು:* ಜಿಲ್ಲಾಧ್ಯಕ್ಷರಾಗಿ ಹಿಮಂತ್ ರಾಜ್ ಬಿ., ಗೌರವಾಧ್ಯಕ್ಷರಾಗಿ ಎರ್ರಿಸ್ವಾಮಿ (ಸಂಗನಕಲ್), ಉಪಾಧ್ಯಕ್ಷರಾಗಿ ಹೆಚ್. ಎರ್ರಿಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ರಾಜ್ ಎ.ಕೆ., ಸಹ ಕಾರ್ಯದರ್ಶಿಯಾಗಿ ದುರುಗೇಶ್ ಹಾಗೂ ಖಜಾಂಚಿಯಾಗಿ ಶಂಕರ್ ಸ್ವಾಮಿ ಎಸ್.ಎಚ್.ಡಿ. ಆಯ್ಕೆಯಾಗಿದ್ದಾರೆ.
ಇದೇ ವೇಳೆ ಗ್ಯಾನಪ್ಪ, ರಮೇಶ್, ಎಂ. ಎರ್ರಿಸ್ವಾಮಿ, ಚಂದ್ರ ಹಾಗೂ ಹುಲುಗಪ್ಪ ಅವರನ್ನು ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ.
ನೂತನ ಪದಾಧಿಕಾರಿಗಳು ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಸಂಕಲ್ಪ ವ್ಯಕ್ತಪಡಿಸಿದರು.

ಮಹಾನಾಯಕ ಡಾ. ಬಿ.ಆರ್. ಅಂಬೇಡ್ಕರ್ ಸಂಘರ್ಷ ಸಮಿತಿ ಬಳ್ಳಾರಿ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆಲೆಸಿದ ರಾಷ್ಟ್ರಕವಿ ನಿವಾಸ "ಗಿಳಿವಿಂಡು "ಸಮಗ್ರ ಅಭಿವೃದ್ದಿಗಾಗಿ ಕೇರಳ - ಕರ್ನಾಟಕ ಮುಖ್ಯ ಮಂತ್ರಿಯವರಲ್ಲಿಗೆ ನಿಯೋಗ ಬೇಟಿಗೆ ನಿರ್ಧಾರ.