

29th June 2026

ಬಳ್ಳಾರಿ: ನಗರದ ಗುಗ್ಗರಹಟ್ಟಿ ವ್ಯಾಪ್ತಿಯ ಸಾಯಿಕಾಲೋನಿಯಿಂದ ಕೃಷ್ಣಕಾಲೋನಿಯವರೆಗಿನ (ಕೆಲ ಏರಿಯಾದಲ್ಲಿ) ನಿವಾಸಿಗಳು ಕಳೆದ ಹಲವು ವರ್ಷಗಳಿಂದ ಕಡಿಮೆ ವೋಲ್ಟೇಜ್ ಸಮಸ್ಯೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದು ಬಗೆಹರಿಸುವಂತೆ ಜೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೋಹನ್ ಬಾಬು ಮತ್ತು ಕಿರಿಯ ಇಂಜಿನಿಯರ್ ಚಿಟ್ಟಿ ಚಂದ್ರಶೇಖರ್ ಅವರಿಗೆ ಸ್ಥಳೀಯ ನಿವಾಸಿಗಳು ಮನವಿ ಸಲ್ಲಿಸಿದರು.
ವಿದ್ಯುತ್ ಸಂಪರ್ಕದಲ್ಲಿನ ಏರಿಳಿತದಿಂದಾಗಿ ನಿತ್ಯಬಳಕೆಯ ವಿದ್ಯುತ್ ಉಪಕರಣಗಳು ಕೆಲಸ ನಿರ್ವಹಿಸದೇ, ಸ್ಥಳೀಯರು ಕಂಗಾಲಾಗಿದ್ದಾರೆ.
ಗುಗ್ಗರಹಟ್ಟಿ ಪ್ರದೇಶದ ವಿದ್ಯುತ್ ಲೈನ್ಗಳಲ್ಲಿ ಅಗತ್ಯ ಪ್ರಮಾಣದ ವೋಲ್ಟೇಜ್ ಸರಬರಾಜು ಆಗುತ್ತಿಲ್ಲ. ವಿದ್ಯುತ್ ಸಂಪರ್ಕ ಸರಿಯಿಲ್ಲದ ಕಾರಣ ಫ್ಯಾನ್, ಫ್ರಿಜ್, ವಾಷಿಂಗ್ ಮಷಿನ್ ಸೇರಿದಂತೆ ಇತರೆ ವಿದ್ಯುತ್ ಉಪಕರಣಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸಂಜೆಯಾಗುತ್ತಿದ್ದಂತೆ ವೋಲ್ಟೇಜ್ ಮಟ್ಟ ಇನ್ನಷ್ಟು ಕುಸಿಯುತ್ತಿದ್ದು, ವಿದ್ಯಾರ್ಥಿಗಳ ಓದಿಗೆ ಮತ್ತು ಹಿರಿಯ ನಾಗರಿಕರಿಗೆ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.
ಈ ಕುರಿತು "ಹಲವು ವರ್ಷಗಳಿಂದಲೂ ಇದೇ ಸಮಸ್ಯೆ ಕಾಡುತ್ತಿದೆ. ಸಂಬಂಧಪಟ್ಟ ಸಿಬ್ಬಂದಿಗಳನ್ನು ಕಳುಹಿಸಿ ಕೂಡಲೇ ಪರಿಶೀಲನೆ ನಡೆಸಿ, ವಿದ್ಯುತ್ ಮಾರ್ಗಗಳನ್ನು ಸರಿಪಡಿಸಬೇಕು," ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಿವಾಸಿಗಳಾದ ನೂರ್, ಗಪೂರ್ ಸಾಬ್, ಶರ್ಮಸ್, ವಲಿಸಾಬ್ , ಸುಂಕಣ್ಣ ಇದ್ದರು.

ಮಹಾನಾಯಕ ಡಾ. ಬಿ.ಆರ್. ಅಂಬೇಡ್ಕರ್ ಸಂಘರ್ಷ ಸಮಿತಿ ಬಳ್ಳಾರಿ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆಲೆಸಿದ ರಾಷ್ಟ್ರಕವಿ ನಿವಾಸ "ಗಿಳಿವಿಂಡು "ಸಮಗ್ರ ಅಭಿವೃದ್ದಿಗಾಗಿ ಕೇರಳ - ಕರ್ನಾಟಕ ಮುಖ್ಯ ಮಂತ್ರಿಯವರಲ್ಲಿಗೆ ನಿಯೋಗ ಬೇಟಿಗೆ ನಿರ್ಧಾರ.

ಕಂಪ್ಲಿ ಶಾಸಕ ಜೆ.ಎನ್. ಗಣೇಶ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಬೃಹತ್ ಪಾದಯಾತ್ರೆ