

6th July 2026

ಹೊಳಲ್ಕೆರೆ, ಜು. 6: ಕರ್ನಾಟಕ ಸರ್ಕಾರವು ಕರ್ನಾಟಕ ನಾಗರೀಕ ಸೇವಾ ನಿಯಮಗಳು–2006ಕ್ಕೆ ತಿದ್ದುಪಡಿ ಮಾಡುವ ಮೂಲಕ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪ್ರೌಢಶಾಲೆಯ 9 ಮತ್ತು 10ನೇ ತರಗತಿಗಳಿಗೆ ಬೋಧನೆ ಮಾಡುವ ಅವಕಾಶ ಕಲ್ಪಿಸಿರುವ ಕರಡು ತಿದ್ದುಪಡಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ, ಜುಲೈ 9ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಕರ್ನಾಟಕ ರಾಜ್ಯ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳಲಾಗಿದೆ.
ರಾಜ್ಯಾಧ್ಯಕ್ಷ ಎ. ಹೆಚ್. ನಿಂಗೇಗೌಡ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಹೋರಾಟದಲ್ಲಿ ಹೊಳಲ್ಕೆರೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಚಾರ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಮುಖಂಡರು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಆರ್. ಚಂದ್ರಶೇಖರ ಮಾತನಾಡಿ, ಪದವಿ ಪೂರ್ವ ಶಿಕ್ಷಣದ ಗುಣಮಟ್ಟ ಮತ್ತು ಉಪನ್ಯಾಸಕರ ಸೇವಾ ಹಿತದೃಷ್ಟಿಯಿಂದ ಈ ಕರಡು ತಿದ್ದುಪಡಿಯನ್ನು ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಪ್ರಾಚಾರ್ಯರಾದ ಅಶೋಕ್ ಎನ್., ಮಹೇಶ್ವರಪ್ಪ, ನಿರಂಜನಕುಮಾರ್, ಶಿವರುದ್ರಮೂರ್ತಿ ಹಾಗೂ ಶಿವಣ್ಣ ಉಪಸ್ಥಿತರಿದ್ದರು. ಉಪನ್ಯಾಸಕರ ಸಂಘದ ಪದಾಧಿಕಾರಿಗಳಾದ ಭೈರಪ್ಪ, ಮಹಾಂತೇಶ್, ಸಿದ್ದೇಶ್, ಕರಿಬಸವೇಶ್ವರ, ಮಂಜಪ್ಪ, ಉಮೇಶ್, ವಿಜಯ್, ರಂಗಸ್ವಾಮಿ, ಮಲ್ಲಿಕಾರ್ಜುನ, ಮೂರ್ತಿ, ಗಣೇಶ್, ಜಿ.ಆರ್. ಮಂಜುನಾಥ್ ಮತ್ತು ಮಂಜಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಐದು ದಿನದಲ್ಲೇ ಎಸ್ಐಆರ್ ವಿಶೇಷ ಮತಪಟ್ಟಿ ಪರಿಷ್ಕರಣೆ ಪೂರ್ಣ: ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ.ಪಿ. ಉಮೇಶ್ಗೆ ತಹಸಿಲ್ದಾರರ ಅಭಿನಂದನೆ

ಸಾಲಬಾಧೆ ತಾಳಲಾರದೆ ಪತಿ, ಪತ್ನಿ, ಮಗ ನೇಣಿಗೆ ಶರಣು- ಸ್ಥಳಕ್ಕೆ-ಎಸ್.ಪಿ ರಾಮ್ ಅರಸಿದ್ದಿ ಭೇಟಿ