

7th July 2026

ಹೊಳಲ್ಕೆರೆ, ಜು. 7: ಹೊಳಲ್ಕೆರೆ ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್ ಎಸ್. ಹಾಗೂ ತಾಲೂಕು ದಂಡಾಧಿಕಾರಿ ವಿಜಯಕುಮಾರ್ ಕೊರಲಗುಂದಿ ಅವರು ಸಂಯುಕ್ತವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮತದಾರರ ಪಟ್ಟಿಯನ್ನು ನಿಖರ ಹಾಗೂ ಸಮಗ್ರವಾಗಿ ಪರಿಷ್ಕರಿಸುವ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದರು.
ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅನಗತ್ಯ ಹೆಸರುಗಳ ತೆರವು ಕಾರ್ಯವನ್ನು ನಿಯಮಾನುಸಾರ ಕೈಗೊಳ್ಳುವಂತೆ ಅಧಿಕಾರಿಗಳು ತಿಳಿಸಿದರು. ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಂಡು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ವಿಆರ್ಡಬ್ಲ್ಯು (VRW) ಸಿಬ್ಬಂದಿ, ತಾಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

ಅಂಜನಾದ್ರಿ ದೇವಸ್ಥಾನ: ಹುಂಡಿ ಎಣಿಕೆ- 64 ದಿನದಲ್ಲಿ ರೂ.71.77 ಲಕ್ಷ ಸಂಗ್ರಹ- ವಿದೇಶಿ ಕರೆನ್ಸಿ ದೇಣಿಗೆ