

10th July 2026

ಹೊಳಲ್ಕೆರೆ, ಜು. 10: ತಾಲೂಕಿನ ತಾಳ್ಯ ಗ್ರಾಮ ಪಂಚಾಯಿತಿ ವತಿಯಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಭಿಯಾನಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳಾದ ಶಿವಪ್ರಕಾಶ್ ಎಸ್. ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಬೀದಿಗಳಲ್ಲಿ ಜಾಗೃತಿ ಮೂಡಿಸಿ, ಎಸ್ಐಆರ್ ಅಭಿಯಾನದಡಿ ಮನೆ ಬಾಗಿಲಿಗೆ ಆಗಮಿಸುವ ಬಿ.ಎಲ್.ಒ.ಗಳಿಗೆ ಸಾರ್ವಜನಿಕರು ಅಗತ್ಯ ಮಾಹಿತಿಯನ್ನು ನೀಡಿ ಸಹಕರಿಸುವಂತೆ ಮನವಿ ಮಾಡಿದರು.
ಪ್ರತಿಯೊಬ್ಬ ಅರ್ಹ ಮತದಾರರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶುಭ ಉಪಸ್ಥಿತರಿದ್ದರು. ಜಾಗೃತಿ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ಎಸ್ಐಆರ್ ಕುರಿತು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸಿಬ್ಬಂದಿ ವಿನಯ್ ಕುಮಾರ್, ಗಿರಿಧರ್, ತಾಳ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಮೂರ್ತಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ತಿಮ್ಮೇಶ್, ಡೇಟಾ ಆಪರೇಟರ್ ಕುಮಾರಿ ಜ್ಯೋತಿ, ಕಾಲೇಜಿನ ಪ್ರಾಂಶುಪಾಲರು, ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಎನ್ಆರ್ಎಲ್ಎಂ ಸಿಬ್ಬಂದಿ ವಿಜಯ್ ಕುಮಾರ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ನಾಗರಾಜ ಕೆ.

ಅಂಜನಾದ್ರಿ ದೇವಸ್ಥಾನ: ಹುಂಡಿ ಎಣಿಕೆ- 64 ದಿನದಲ್ಲಿ ರೂ.71.77 ಲಕ್ಷ ಸಂಗ್ರಹ- ವಿದೇಶಿ ಕರೆನ್ಸಿ ದೇಣಿಗೆ

ಪ್ರೀತಿಸಿ ಕೈ ಕೊಟ್ಟ ಹುಡುಗಿ: ರೈಲ್ವೆಗೆ ತಲೆಕೊಟ್ಟ ಯುವಕ- ಕಾರಟಗಿಯ ಶಿವಕುಮಾರನ ದೇಹ ಪಿಸ್ ಪಿಸ್

ಉಪನ್ಯಾಸಕರಿಗೆ ಪ್ರೌಢಶಾಲಾ ಬೋಧನೆ ಕರಡು ತಿದ್ದುಪಡಿ ಹಿಂಪಡೆಯಲು ಆಗ್ರಹ: ಜು. 9ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ

ಐದು ದಿನದಲ್ಲೇ ಎಸ್ಐಆರ್ ವಿಶೇಷ ಮತಪಟ್ಟಿ ಪರಿಷ್ಕರಣೆ ಪೂರ್ಣ: ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ.ಪಿ. ಉಮೇಶ್ಗೆ ತಹಸಿಲ್ದಾರರ ಅಭಿನಂದನೆ