

11th July 2026

ಹೊಳಲ್ಕೆರೆ, ಜು. 11: ತಾಲೂಕು ಆಡಳಿತದ ವತಿಯಿಂದ ಹೊಳಲ್ಕೆರೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕುರಿತು ವಿದ್ಯಾರ್ಥಿನಿಯರಿಗೆ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್ ಎಸ್., ಮತದಾನವು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು ಹಾಗೂ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕರು ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಮತದಾರರ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು.
ಹಳೆಯ ಮತದಾರರ ಗುರುತಿನ ಚೀಟಿಯನ್ನು (ವೋಟರ್ ಐಡಿ) ಅಗತ್ಯವಿದ್ದಲ್ಲಿ ನವೀಕರಿಸಿಕೊಳ್ಳುವ ಮೂಲಕ ಮತದಾರರ ಪಟ್ಟಿಯನ್ನು ಸಮರ್ಪಕವಾಗಿಡಲು ಸಹಕರಿಸಬೇಕು ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ವಿದ್ಯಾರ್ಥಿನಿಯರು ತಮ್ಮ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವಂತೆ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಸಿಬ್ಬಂದಿ ವಿನಯ್ ಕುಮಾರ್, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ನಾಗರಾಜ್ ಕೆ.

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಅಂಜನಾದ್ರಿ ದೇವಸ್ಥಾನ: ಹುಂಡಿ ಎಣಿಕೆ- 64 ದಿನದಲ್ಲಿ ರೂ.71.77 ಲಕ್ಷ ಸಂಗ್ರಹ- ವಿದೇಶಿ ಕರೆನ್ಸಿ ದೇಣಿಗೆ