26th June 2025
ಕೋಲಾರ:- ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಾಣಿಸಿಕೊಂಡ ಬೆಂಕಿಯಿ0ದಾಗಿ ಸೋಫಾ-ಕುಶನ್ ಗೋದಾಮುಗಳು ಹಾಗೂ ಪ್ಲಾಸ್ಟಿಕ್ ಕಾರ್ಖಾನೆ ಸಂಪೂರ್ಣ ಭಸ್ಮವಾಗಿರುವ ಘಟನೆ ನಗರದ ಅರಹಳ್ಳಿ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿಯ ಪ್ರಮಾಣ ತೀವ್ರವಾಗಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿ, 2 ವಾಹನಗಳಲ್ಲಿ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ಆರಂಭಿಸಿದರು.
ಆ ವೇಳೆಗಾಗಲೇ ಬೆಂಕಿಯ ಕೆನ್ನಾಲಿಗೆ ಎಲ್ಲವನ್ನೂ ಆಹುತಿ ಪಡೆದಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಡಬೇಕಾಯಿತು.
ಇಡೀ ನಗರಕ್ಕೆ ಕಾಣಿಸುವಂತೆ ದಟ್ಟ ಹೊಗೆಯು ಕಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಸತತ 5-6 ಗಂಟೆಗಳಿಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಂದಿಸಲಾಯಿತು.
ಅರಹಳ್ಳಿ ಮುಖ್ಯ ರಸ್ತೆ ಪಕ್ಕದಲ್ಲೇ ಘಟನೆ ನಡೆದಿದ್ದರಿಂದಾಗಿ ನೋಡುವುದಕ್ಕಾಗಿ ನೂರಾರು ಮಂದಿ ಜಮಾಯಿಸಿದ್ದರು. ಗಲ್ಪೇಟೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.
undefined
ಗಣಪತಿ ಮೆರವಣಿಗೆ ಡಿಜೆಗೆ ಪೊಲೀಸರ ಆಕ್ಷೇಪ ಲಾಠಿ ಏಟು: ಪೊಲೀಸರ ವಿರುದ್ಧ ಯುವಕರ ಆಕ್ರೋಶ
ಪರೀಕ್ಷೆ ಮತ್ತು ಕ್ರೀಡಾಕೂಟ ಒಂದೇ ದಿನ ಆಯೋಜನೆ- ಕ್ರೀಡಾ ಮತ್ತು ಶಿಕ್ಷಣ ಇಲಾಖೆಗಳ ಸಮನ್ವಯ ಕೊರತೆ -ಅಧಿಕಾರಿಗಳ ಎಡವಟ್ಟಿಗೆ ವಿದ್ಯಾರ್ಥಿಗಳಲ್ಲಿ ಆತಂಕ