26th June 2025
ಕೋಲಾರ:- ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಾಣಿಸಿಕೊಂಡ ಬೆಂಕಿಯಿ0ದಾಗಿ ಸೋಫಾ-ಕುಶನ್ ಗೋದಾಮುಗಳು ಹಾಗೂ ಪ್ಲಾಸ್ಟಿಕ್ ಕಾರ್ಖಾನೆ ಸಂಪೂರ್ಣ ಭಸ್ಮವಾಗಿರುವ ಘಟನೆ ನಗರದ ಅರಹಳ್ಳಿ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿಯ ಪ್ರಮಾಣ ತೀವ್ರವಾಗಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿ, 2 ವಾಹನಗಳಲ್ಲಿ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ಆರಂಭಿಸಿದರು.
ಆ ವೇಳೆಗಾಗಲೇ ಬೆಂಕಿಯ ಕೆನ್ನಾಲಿಗೆ ಎಲ್ಲವನ್ನೂ ಆಹುತಿ ಪಡೆದಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಡಬೇಕಾಯಿತು.
ಇಡೀ ನಗರಕ್ಕೆ ಕಾಣಿಸುವಂತೆ ದಟ್ಟ ಹೊಗೆಯು ಕಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಸತತ 5-6 ಗಂಟೆಗಳಿಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಂದಿಸಲಾಯಿತು.
ಅರಹಳ್ಳಿ ಮುಖ್ಯ ರಸ್ತೆ ಪಕ್ಕದಲ್ಲೇ ಘಟನೆ ನಡೆದಿದ್ದರಿಂದಾಗಿ ನೋಡುವುದಕ್ಕಾಗಿ ನೂರಾರು ಮಂದಿ ಜಮಾಯಿಸಿದ್ದರು. ಗಲ್ಪೇಟೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.
undefined
ಬೆಳಗಾವಿ ಸರ್ವಲೋಕ ಸೇವಾ ಫೌಂಡೇಶನ್ ಸಂಸ್ಥಾಪಕ, ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರು ಪರಿಸರ ಕಾಳಜಿ ವಹಿಸುತ್ತಿರುವುದು ಅಭಿಮಾನದ ಸಂಗತಿ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ ಹೇಳಿದರು.