ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ದುರಂತ ಸಾವು
ಇವರಿಂದ: kolarnewschandru
ಅಅಅ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೊಲೆರೋ ವಾಹನ ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.





