27th December 2025

*ಪ್ರತಿಭಾ ಕಾರಂಜಿ : ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ನಂದವಾಡಗಿ ಶಾಲೆ ಮಕ್ಕಳು*
ನಂದವಾಡಗಿ ೨೭: ಬಾಗಲಕೋಟೆ ಜಿಲ್ಲೆಯ ಹುನಗುಂದ / ಇಳಕಲ್ ತಾಲೂಕಿನ ಬಾಲಕಿಯರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿ ವಿದ್ಯಾರ್ಥಿನಿಯರು ಹುನಗುಂದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ, ಕೆಲೂರದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ಪ್ರಾಥಮಿಕ ವಿಭಾಗದಿಂದ ಕಥೆ ಹೇಳುವುದು ಸ್ಪರ್ಧಯಲ್ಲಿ ದಿವ್ಯಾ ಓಗಿ ಪ್ರಥಮ ಸ್ಥಾನ, ಭಕ್ತಿ ಗೀತೆ ಹಾಗೂ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಖುಷಿ ಜಾನೇಕಲ್ಲ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ರೀತಿಯಾಗಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಕಥೆ ಹೇಳುವುದು ಸ್ಪರ್ಧೆಯಲ್ಲಿ ಭಾಗ್ಯ ಈಟಿ ಪ್ರಥಮ ಸ್ಥಾನ, ಆಶು ಭಾಷಣ ಸ್ಪರ್ಧೆಯಲ್ಲಿ ಶಿಲ್ಪಾ ಪಾಲ್ತಿ ಪ್ರಥಮ ಸ್ಥಾನ, ಪ್ರಬಂಧ ಸ್ಪರ್ಧೆಯಲ್ಲಿ ಸನಾಬಾನು ಮುಜಾವರ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ *ಹುನಗುಂದ ತಾಲೂಕಿನಲ್ಲಿಯೇ ಅತಿ ಹೆಚ್ಚು ಪ್ರಶಸ್ತಿ ಪಡೆದ ಶಾಲೆ ನಮ್ಮ ಶಾಲೆ* ಎಂದು ಶಾಲೆಯ ಪ್ರಭಾರಿ ಮುಖ್ಯ ಗುರುಮಾತೆ ವಿ ಬಿ ಕುಂಬಾರ ಸಂತಸ ನುಡಿಗಳನ್ನು ವ್ಯಕ್ತಪಡಿಸಿದರು. ಇದೆ ವೇಳೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಪಾಲಕರು ಶಾಲೆಯ ಕೀರ್ತಿ ಹೆಚ್ಚಿಸಿದ ಈ ಎಲ್ಲಾ ಮುದ್ದು ಮಕ್ಕಳಿಗೆ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದರು. ಶಾಲೆಯ ಸಹ ಶಿಕ್ಷಕಿಯರಾದ ಜಿ ಆರ್ ನದಾಫ್ ಮೇಡಂ, ಜ್ಯೋತಿ ಮೇಡಂ, ಎಸ್ ಬಿ ಮಲಗಿಹಾಳ ಮೇಡಂ, ಬಸವರಾಜ ಬಲಕುಂದಿ, ಡಾ ವಿಶ್ವನಾಥ ತೋಟಿ, ಚಂದ್ರಶೇಖರ ಹುತಗಣ್ಣ, ಅಶ್ವಿನಿ ಕಪ್ಪರದ, ಶಾಲಾ ಮಂತ್ರಿ ಮಂಡಲ ಹಾಗೂ ವಿದ್ಯಾರ್ಥಿನಿಯರು ಶುಭಾಶಯ ತಿಳಿಸಿ ಅಭಿನಂದಿಸಿದ್ದಾರೆ.
ಗ್ರಾಮೀಣ ಪ್ರತಿಭೆಗಳ ಸಾಧನೆ ಸುದ್ದಿ

ವೀರಶೈವ ಲಿಂಗಾಯತ ಸಮಾಜದ ಶ್ರೀಮತಿ ಗಿರಿಜಮ್ಮ ಅಕ್ಕಿ (50) ರಸ್ತೆ ಅಪಘಾತದಲ್ಲಿ ನಿಧನ
-1768489815566.jpg)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ

ಬಳ್ಳಾರಿಯಲ್ಲಿ ಕಳಪೆ ರಸ್ತೆ ಕಾಮಗಾರಿಕೆ ಆರೋಪ : ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ವಿರೋಧ