
15th August 2025
ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಶೇರು ಮಾರುಕಟ್ಟೆ ಸಂಸ್ಥೆಯ ಅಡಿಯಲ್ಲಿ ಹೂಡಿಕೆಯ ಅರಿವು ಎಂಬ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಬುಧವಾರ ಉದ್ಘಾಟಿಸಲಾಯಿತು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನಿರ್ವಹಣಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮಹಂತೇಶ್ ಕುರಿ ಉದ್ಘಾಟಿಸಿ ಬಿಕಾಂ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು ವಿದ್ಯಾರ್ಥಿಗಳಲ್ಲಿ ಹಣಕಾಸಿನ ಅರಿವು ಮತ್ತು ಶಿಕ್ಷಣವನ್ನು ಒದಗಿಸುವುದಕ್ಕಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆ ಸಂಸ್ಥೆಯು ಹಲವಾರು ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು ಈ ಈ ಕಾರ್ಯಗಾರವು ಎರಡು ದಿನಗಳ ಎಂಟು ಗೋಷ್ಠಿಗಳಲ್ಲಿ ನಡೆಯಲಿದ್ದು ಹಣಕಾಸಿನ ಯೋಜನೆ ಉಳಿತಾಯ ಮತ್ತು ಹೂಡಿಕೆಯ ತಂತ್ರಗಳು ಶೇರುಪೇಟೆಯನಿಯಂತ್ರಣ ವ್ಯವಸ್ಥೆಯ ಚೌಕಟ್ಟು ವಿಷಯಗಳ ಅರಿವನ್ನು ಮೂಡಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮುಕುಂದ ಮುಂಡರಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಬದಲಾಗುತ್ತಿರುವ ಹಣಕಾಸಿನ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹಣಕಾಸಿನ ಶಿಕ್ಷಣ ಮತ್ತು ಅರಿವಿನ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ವಿಭಾಗವು ಕಾರ್ಯನಿರ್ವಹಿಸುತ್ತಿದೆ ಎಂದರು ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ಬಿಕಾಂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಗಾರವನ್ನು ಯಶಸ್ವಿಗೊಳಿಸಿದರು. ವಿದ್ಯಾರ್ಥಿನಿಯರಾದ ಹಿನಾ ಜಿಂಜುವಾದ್ ನಿರೂಪಿಸಿದರು ಫಲಕ್ ನಾಜ್ ಅತಿಥಿಗಳನ್ನು ಪರಿಚಯಿಸಿದರು ಸಂಜನಾ ಮುದಿಗೌಡರ್ ವಂದಿಸಿದರು ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.
ಬೆಳಗಾವಿ ದರ್ಪಣ ರೋಟರಿ ಕ್ಲಬ್ – “ಜೀವನ ಆರಿಸಿ, ವ್ಯಸನ ಬಿಡಿ” ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ