

14th December 2025

ಬೆಳಗಾವಿ: ಕನ್ನಡ ಪುಸ್ತಕ ಪ್ರಾಧಿಕಾರ–ಜಾಗೃತ ಸಮಿತಿ ರಚನೆ ಸಭೆ
ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಬೆಳಗಾವಿ ಜಿಲ್ಲಾ ಜಾಗೃತ ಸಮಿತಿ ರಚನೆ ಸಭೆ ಹಾಗೂ ಸಮಿತಿ ಸದಸ್ಯರಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಇಂದು ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ಡಿ. ಎಸ್. ಚೌಗಲೆ ಅವರು, ಕನ್ನಡದ ಪುಸ್ತಕಗಳನ್ನು ಓದುಗರ ಬಳಿಗೆ ತಲುಪಿಸುವ ಮಹತ್ವದ ಕಾರ್ಯವನ್ನು ಕನ್ನಡ ಪುಸ್ತಕ ಪ್ರಾಧಿಕಾರ ಮಾಡುತ್ತಿದೆ ಎಂದು ಪ್ರಶಂಸಿಸಿದರು. ಇಂತಹ ಪ್ರಯತ್ನಗಳು ಕನ್ನಡ ಸಾಹಿತ್ಯದ ವಿಸ್ತಾರಕ್ಕೆ ಮತ್ತು ಓದುಗರ ಸಂಖ್ಯೆಯ ವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಮಾತನಾಡಿ, ಪ್ರಾಧಿಕಾರದ ಉದ್ದೇಶಗಳು, ನಡೆಯುತ್ತಿರುವ ಯೋಜನೆಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕಾರ್ಯಯೋಜನೆಗಳ ಕುರಿತು ವಿವರಿಸಿದರು. ಜಿಲ್ಲಾ ಮಟ್ಟದಲ್ಲಿ ಜಾಗೃತ ಸಮಿತಿಗಳ ರಚನೆಯಿಂದ ಕನ್ನಡ ಪುಸ್ತಕಗಳ ಪ್ರಚಾರ ಹಾಗೂ ವಿತರಣೆಗೆ ಇನ್ನಷ್ಟು ಬಲ ಸಿಗಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಕುಶಾಲ ಬರಗೂರ ಅವರು ಮಾಡಿದರು. ಹಿರಿಯ ಸಾಹಿತಿ ಯಲ್ಲಪ್ಪ ಹಿಮ್ಮಡಿ ಸರ್ ಹಾಗೂ ಶಂಕರ ಬಾಗೇವಾಡಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಸಾಹಿತಿ ಶಂಕರ ಬಾಗೇವಾಡಿ ಅವರು ನಿಭಾಯಿಸಿದರು.ಸ್ವಾಗತವನ್ನು ಶ್ರೀನಿವಾಸ ಕರಿಯಪ್ಪ ನೇರವೆರಿಸಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಜಾಗೃತ ಸಮಿತಿ ಸದಸ್ಯರಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಾಹಿತಿಗಳು, ಸಾಹಿತ್ಯಾಸಕ್ತರು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವೀರಶೈವ ಲಿಂಗಾಯತ ಸಮಾಜದ ಶ್ರೀಮತಿ ಗಿರಿಜಮ್ಮ ಅಕ್ಕಿ (50) ರಸ್ತೆ ಅಪಘಾತದಲ್ಲಿ ನಿಧನ
-1768489815566.jpg)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ

ಬಳ್ಳಾರಿಯಲ್ಲಿ ಕಳಪೆ ರಸ್ತೆ ಕಾಮಗಾರಿಕೆ ಆರೋಪ : ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ವಿರೋಧ