Skip to main content
ಮುಂಜಾನೆ ಬೆಳಕು

“ಶಿಕ್ಷಕರು ಆರೋಗ್ಯಕರ ಸಮಾಜ ನಿರ್ಮಾಣದ ಶಿಲ್ಪಿಗಳು” — ಡಾ. ಶರಣಪ್ಪ ಎಂ. ಕೊಟಗಿ

  “ಶಿಕ್ಷಕರು ಆರೋಗ್ಯಕರ ಸಮಾಜ ನಿರ್ಮಾಣದ ಶಿಲ್ಪಿಗಳು” — ಡಾ. ಶರಣಪ್ಪ ಎಂ. ಕೊಟಗಿ image

“ಶಿಕ್ಷಕರು ಆರೋಗ್ಯಕರ ಸಮಾಜ ನಿರ್ಮಾಣದ ಶಿಲ್ಪಿಗಳು” — ಡಾ. ಶರಣಪ್ಪ ಎಂ. ಕೊಟಗಿ


ಧಾರವಾಡ: ಸತ್ತೂರಿನ ಶ್ರೀ ಬಸವೇಶ್ವರ ರೂರಲ್ ಎಜುಕೇಶನ್ ಆ್ಯಂಡ್ ಡೆವಲಪ್ಮೆಂಟ್ ಟ್ರಸ್ಟ್ (ರಿ.) ಹಾಗೂ ಡಾ. ಶರಣಪ್ಪ ಎಂ. ಕೊಟಗಿ ಚಾರಿಟೇಬಲ್ ಟ್ರಸ್ಟ್ ಹಾಗೂ ರೂರಲ್ ಬಿ.ಇಡಿ. ಕಾಲೇಜು ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಬಸವೇಶ್ವರ ರೂರಲ್ ಎಜುಕೇಶನ್ ಆ್ಯಂಡ್ ಡೆವಲಪ್ಮೆಂಟ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಶರಣಪ್ಪ ಎಂ. ಕೊಟಗಿ ಮಾತನಾಡಿ, ಶಿಕ್ಷಕರು ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಇವರ ಪಾತ್ರ ಅಮೂಲ್ಯವಾದದು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಅತ್ಯಂತ ಪ್ರಮುಖವಾಗಿದೆ. ಭಾರತದ ಅಭಿವೃದ್ಧಿ ಹಾಗೂ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಅನೇಕ ಗಣ್ಯ ವ್ಯಕ್ತಿಗಳ ಜೀವನ ಮತ್ತು ಸಾಧನೆಗಳು ಇಂದಿನ ಪ್ರಶಿಕ್ಷಣಾರ್ಥಿಗಳಿಗೆ ಮಾದರಿಯಾಗಬೇಕು. ವಿಶೇಷವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಆದರ್ಶಗಳನ್ನು ಶಿಕ್ಷಕ ವೃತ್ತಿಗೆ ಪ್ರವೇಶಿಸುತ್ತಿರುವವರು ಅಳವಡಿಸಿಕೊಳ್ಳಬೇಕು ಎಂದು ಡಾ. ಶರಣಪ್ಪ ಕೊಟಗಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು 


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ರೂರಲ್ ಬಿ.ಇಡಿ. ಕಾಲೇಜಿನ ಪ್ರಾಚಾರ್ಯರಾದ ಡಾ. ಮಾಂತೇಶ್ ಹಿರೇಮಠ ಮಾತನಾಡಿ, ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ಅವರು ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು, ಮೌಲ್ಯಗಳು, ಸೃಜನಶೀಲತೆ ಹಾಗೂ ಮಾನವೀಯ ಗುಣಗಳನ್ನು ಬೆಳೆಸುವ ಮಾರ್ಗದರ್ಶಕರಾಗಿದ್ದಾರೆ. ಉತ್ತಮ ಶಿಕ್ಷಕರು ಉತ್ತಮ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿಯಾಗುತ್ತಾರೆ. ಗುರು ಹಿರಿಯರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಪ್ರಾಚಾರ್ಯ ಮಹಾಂತೇಶ್ ಹಿರೇಮಠ್ ಹೇಳಿದರು.


ಶಿಕ್ಷಕರ ದಿನಾಚರಣೆಯ ಅಂಗವಾಗಿ ಪ್ರಶಿಕ್ಷಣಾರ್ಥಿಗಳಾದ ವಿದ್ಯಾ ಇಬ್ರಾಹಿಂಪುರ, ನೆಹರಾಣಿ ಹಾಗೂ ಭೀಮರಾವ್ ಅವರು ಶಿಕ್ಷಕರ ದಿನಾಚರಣೆಯ ಮಹತ್ವ ಹಾಗೂ ಶಿಕ್ಷಕರ ಪಾತ್ರ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಬಿ.ಇಡಿ. ಕಾಲೇಜಿನ ಪ್ರಾಧ್ಯಾಪಕರಾದ ಎಲ್.ವೈ. ಬುಡ್ಡನವರ, ನವೀನ್ ಕೊರಡೂರ, ವಾಗೀಶ ಹಿರೇಮಠ, ಮಂಗಳಾ ಹಿರೇಮಠ, ಶಿರೀನ್ ಹತ್ತಿಮತ್ತೂರು, ರಂಗನಾಥ ದಾಸರ, ಭಾಗ್ಯಶ್ರೀ ಹಾಗೂ ರಾಜೇಶ್ವರಿ, ಕೆ.ಎಚ್. ಡಿಗ್ರಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರವೀಣ್ ಪೂಜಾರಿ, ಮಲ್ಲಪ್ಪ ಬೈರಪ್ಪನವರ, ಉಮೇಶ್ ಜಾವೂರ್ ಹಾಗೂ ಗಂಗಪ್ಪ ತಡಸ್ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.


ಆಶಾ ಬೇಗಂ ರೂಪಿಸಿದರು ಸ್ ಭೋಗೇಶ್ ಪ್ರಾರ್ಥಿಸಿದರು. ಪ್ರಾರ್ಥನಾ ಗೀತೆಯನ್ನು ಅಕ್ಷತಾ ಗುಗ್ಗರಿ ನೆರವೇರಿಸಿದರು. ಅಬ್ಬಾಸ್ ಅಲಿ ವಂದಿಸಿದರು.

Comments