
27th September 2024
ಮಲ್ಲಮ್ಮ ನುಡಿ ವಾರ್ತೆ
ಬೆಂಗಳೂರು, ಸೆಪ್ಟೆಂಬರ್ 26-ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು, ಕಾನೂನು ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಭಾರತದ ಸಂವಿಧಾನದ 17ನೇ ವಿಧಿಯು "ಅಸ್ಪೃಶ್ಯತೆ" ಯನ್ನು ನಿμÉೀಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ/ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಅವರು ನಿರ್ವಹಿಸುವ ಉದ್ಯೋಗಕ್ಕಿಂತ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ನೈರ್ಮಲ್ಯ ಕಾರ್ಮಿಕರ/ಪೌರಕಾರ್ಮಿಕರ ವಿರುದ್ಧ ತಾರತಮ್ಯವು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ.
ಯಾವುದೇ ಸ್ಥಳದಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಸದಸ್ಯರನ್ನು ಜಾತಿ ಹೆಸರಿನಿಂದ ನಿಂದಿಸುವುದು ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸುವುದು ಅಥವಾ ಬೆದರಿಕೆ ಹಾಕುವುದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ತಿದ್ದುಪಡಿ ಕಾಯಿದೆ 2015 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಈ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಎಲ್ಲಾ ನಿವಾಸಿಗಳು ಮತ್ತು ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ ತಾವು ವಾಸಿಸುವ ಸ್ಥಳವನ್ನು / ಪರಿಸರವನ್ನು ದಿನನಿತ್ಯ ಸ್ವಚ್ಛಗೊಳಿಸುವ ಮೂಲಕ ಪೌರಕಾರ್ಮಿಕರು ತಮ್ಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಬಹು ಮಹತ್ತರ ಪಾತ್ರವಹಿಸುತ್ತಿದ್ದಾರೆ. ಪೌರಕಾರ್ಮಿಕರನ್ನು ಗೌರವದಿಂದ ಮತ್ತು ಘನತೆಯಿಂದ ನಡೆಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪೌರಕಾರ್ಮಿಕರನ್ನು ಅವರ ವೃತ್ತಿಯನ್ನು ಗೌರವಿಸಿ, ಅವರು ಸಮಾಜದಲ್ಲಿ ಘನತೆಯಿಂದ ಬದುಕಲು ಸಹಕರಿಸಲು, ಪೌರಕಾರ್ಮಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಿಯಾಂಕ್ ಖರ್ಗೆರನ್ನು ನಾಯಿಗೆ ಹೋಲಿಕೆ ಮಾಡಿ ನಿಂದನೆ- ಕಾನೂನು ಕ್ರಮಕ್ಕೆ ಅಲ್ಲಂ ಪ್ರಶಾಂತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಜಿಲ್ಲಾ ಅಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಾದೇಶಿಕ ಸಾರಿಗೆ ಕಚೇರಿಗೆ ಬೇಟಿ ಸ್ಪಿಡ್ ಗವರ್ನರ್ ಕಡ್ಡಾಯವಾಗಿ ಆಳವಡೆಕೆ ಮಾಡಬೇಕು ಎಂದು ಸೂಚನೆ