
15th April 2025
ಬೀದರ. ಏ. 14 :- ನಗರದ ಶಿವನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರದಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬೀದರ್ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಚಿದ್ರಿ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಮುಖಂಡ ಶಂಕರ ದೊಡ್ಡಿ ಮತ್ತಿತರರು ಇದ್ದರು.
ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಇನ್ನುಳಿದ ಮೂವರನ್ನು ಸಹ ಅಮಾನತು ಮಾಡಿ: ಬಂಗ್ಲೆ ಮಲ್ಲಿಕಾರ್ಜುನ್
ಸಂವಿಧಾನ ಶಿಲ್ಪಿ ಡಾ,ಬಿ,ಆರ್,ಅಂಬೇಡ್ಕರವರ ೧೩೪ ನೇಯ ಜಯಂತೋತ್ಸವ ಅದ್ದೂರಿ ಸಂಭ್ರಮದ ಮೇರವಣಿಗೆ!!
ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ಏ.೨೦ ಕೂಡಲಸಂಗಮದಲ್ಲಿ ಪಂಚಮಸಾಲಿ ಸಮಾಜದ ರಾಜ್ಯಮಟ್ಟದ ಸಭೆ