
23rd April 2025
ಬೀದರ (ಕರ್ನಾಟಕ ವಾರ್ತೆ) ಏಪ್ರಿಲ್.22: 2025-26ನೇ ಸಾಲಿಗೆ ಜಿಲ್ಲೆಯಲ್ಲಿನ ಪ್ರತಿಷ್ಠಿತ ಶಾಲೆಯ (ಕನ್ನಡ ಮಾಧ್ಯಮ) ವಸತಿ ಶಾಲೆಯಲ್ಲಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ https://swdservices.karnataka.gov.in/EducationPrestigious/authentication/login?redirectUrl=%2Fprofile ಮೂಲಕ ಆನ್ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಗಳೊಳಗಿರಬೇಕು. ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಅತಿ ಹಿಂದುಳಿದ ವರ್ಗದವರಿಗೆ ಈ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ. ಪೌರ ಕಾರ್ಮಿಕರ ಮಕ್ಕಳು. ಸಫಾಯಿ ಕರ್ಮಚಾರಿಗಳ ಮಕ್ಕಳು. ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮಕ್ಕಳು. ದೇವದಾಸಿ ರವರ ಮಕ್ಕಳು, ಅಂಗವಿಕಲತೆಯನ್ನು ಹೊಂದಿರುವವರು. ಕೋವೀಡ್ ಮುಂತಾದ ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು. ಏಕ ಪೋಷಕ ಮಕ್ಕಳು. ಯೋಜನಾ ನಿರಾಶ್ರಿತರ ಮಕ್ಕಳು. ಕೊಳಗೇರಿಗಳಲ್ಲಿ ವಾಸಿಸುತ್ತಿರುವವರ ಮಕ್ಕಳು. ಸಾಲ ಬಾಧೆಯಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು. ದೌರ್ಜನ್ಯದಲ್ಲಿ ನೊಂದವರ ಮಕ್ಕಳು. ಮಾಜಿ ಸೈನಿಕರ ಮಕ್ಕಳು. ಕೃಷಿ ಕಾರ್ಮಿಕರ ಮಕ್ಕಳು. ಜೀತ ವಿಮುಕ್ತ ಮಕ್ಕಳು.
ಪ್ರಮುಖವಾಗಿ ಈ ಮೇಲಿನ ಹಿಂದುಳಿದ ವರ್ಗದವರಿಗೆ ಹಾಗೂ 5ನೇ ತರಗತಿಯಲ್ಲಿ ತೇರ್ಗಡೆಯಾಗಿ ಶೇಕಡಾ 60% ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮುಖ್ಯತೆ ನೀಡಲಾಗುವುದು.
ಸದರಿ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳ ಆಯ್ಕೆ ಕೋರಿ ಮಾದ್ಯಮಗಳನ್ನು ಕಡ್ಡಾಯವಾಗಿ ಸ್ಪಷ್ಟವಾಗಿ ಅರ್ಜಿಗಳಲ್ಲಿ ನಮೂದಿಸತಕ್ಕದ್ದು. ಒಂದು ಕುಟುಂಬದಲ್ಲಿ ಇಬ್ಬರಿಗೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ, ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೂ ಅಥವಾ ಬಾಲಕಿ ಇಲ್ಲದಿದ್ದಲ್ಲಿ ಇಬ್ಬರು ಬಾಲಕರಿಗೆ ಪ್ರವೇಶಾವಕಾಶ ಕಲ್ಪಿಸತಕ್ಕದ್ದು. ಪ್ರವೇಶ ಕೋರಿ ಬರುವ ಅರ್ಜಿಗಳಲ್ಲಿ ಶೇಕಡಾ 50% ರಷ್ಟು ಬಾಲಕರಿಗೆ ಮತ್ತು ಶೇಕಡಾ 50% ಬಾಲಕಿಯರಿಗೆ ಮೀಸಲಾತಿಯನ್ನು ಕಲ್ಪಿಸುವುದು.ಆಯ್ಕೆ ಮಾಡಲಾದ ವಿದ್ಯಾರ್ಥಿಗಳನ್ನು ಯಾವ ವಿದ್ಯಾ ಸಂಸ್ಥೆಗಳಲ್ಲಿ ದಾಖಲಾತಿ ಕೋರುತ್ತಾರೆ ಅದೇ ಶಾಲೆಯಲ್ಲಿ ಕಲ್ಪಿಸಲಾಗುವುದು. ಪರಿಶಿಷ್ಟ ಜಾತಿಯ 50 ವಿದ್ಯಾರ್ಥಿಗಳ ಗುರಿ ನಿಗದಿಪಡಿಸಲಾಗಿದೆ.
ಕಾರಣ 6ನೇ ತರಗತಿ ಪ್ರವೇಶಕ್ಕಾಗಿ ದಿನಾಂಕ: 15-04-2025 ರಿಂದ ದಿನಾಂಕ: 03-05-2025 ರ ಸಾಯಂಕಾಲ 5:00 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ ಸಹಾಯವಾಣಿ-೧೯೩೦ ಹಾಗೂ ವೆಬ್ಬಾಟ್ ಉನ್ನತೀಕರಣ
ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಅಲೆಮಾರಿ ಸಮುದಾಯ ಜನರಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಲಾಗಿದೆ ಜಾಗೃತಿ ಮೂಡಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು -ಪಲ್ಲವಿ ಜಿ.