
23rd April 2025
ಮಲ್ಲಮ್ಮ ನುಡಿ ವಾರ್ತೆ
ಭಾಲ್ಕಿ: ಲಿಂಗೈಕ್ಯ ಡಾ. ಚನ್ನಬಸವ ಪಟ್ಟದ್ದೇವರ ಆದರ್ಶ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದು ರಾಜ್ಯ ಪಾಲ ಥಾವರಚಂದ ಗೆಹ್ಲೋಟ್ ಅಭಿಪ್ರಾಯಪಟ್ಟರು.
ಪಟ್ಟಣದ ಚನ್ನಬಸವಾಶ್ರಮದಲ್ಲಿ ಲಿಂ.ಡಾ.ಚನ್ನಬಸವ ಪಟ್ಟದ್ದೇವರ ೨೬ನೇ ಸ್ಮರಣೋತ್ಸವ ನಿಮಿತ್ಯ ನಡೆದ ವಚನ ಜಾತ್ರೆ ೨೦೨೫ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ಭಾಗದ ನಡೆದಾಡುವ ದೇವರೆಂದೇ ಖ್ಯಾತರಾದ ಲಿಂ. ಡಾ. ಚನ್ನಬಸವ ಪಟ್ಟದ್ದೇವರು, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ದೀನ, ದಲಿತರ ಉದ್ಧಾರಕ್ಕಾಗಿ ಹಲವಾರು ಕಾರ್ಯಗಳನ್ನು ಮಾಡಿ ಜನಮಾನಸದಲ್ಲಿ ಉಳಿದಿದ್ದಾರೆ. ಅವರ ತತ್ವಾದರ್ಶಗಳು ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು ಹೇಳಿದರು.
ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ದಿವ್ಯ ಸನ್ನಿಧಾನ ವಹಿಸಿ ಮಾತನಾಡಿದರು. ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರೇಮಠದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಥಣಿಯ ಪ್ರಭು ಚನ್ನಬಸವ ಸ್ವಾಮಿಗಳು, ಲೋಕ ಸಭಾ ಸದಸ್ಯ ಸಾಗರ ಈಶ್ವರಖಂಡ್ರೆ, ಮಾಜಿ ಸಚಿವ ರಾಜಶೇಖರ ಪಾಟಿಲ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ನಾರಂಜಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಡಿ.ಕೆ.ಸಿದ್ರಾಮ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಎಸ್.ಪಿ. ಪ್ರದೀಪ ಗುಂಟಿ, ಡಿವಾಯ್ಎಸ್ಪಿ ಶಿವಾನಂದ ಪವಾಡಶೆಟ್ಟಿ, ಭಾರತೀಯ ಬಸವ ಬಳಗದ ಶಕುಂತಲಾ ಬೆಲ್ದಾಳೆ ಉಪಸ್ಥಿತರಿದ್ದರು.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸ್ವಾಗತಿಸಿದರು. ಆಕಾಶವಾಣಿ ಕಲಾವಿದ ನವಲಿಂಗ ಪಾಟೀಲ ನಿರೂಪಿಸಿದರು. ಡಾ. ಅಮೀತ ಅಷ್ಟೂರೆ ವಂದಿಸಿದರು.
ಪ್ರಶಸ್ತಿ ಪುರಸ್ಕಾರ
ಇದೇವೇಳೆ ಮೋಟಗಿ ಮಠ ಅಥಣಿಯ ಶ್ರೀ ಪ್ರಭು ಚನ್ನಬಸವ ಸ್ವಾಮಿಗಳಿಗೆ ಡಾ. ಚನ್ನಬಸವ ಪಟ್ಟದ್ದೇವರ ಸಾಹಿತ್ಯ ಪ್ರಶಸ್ತಿ, ಲೋಕೋಪಯೋಗಿ ಇಲಾಖೆ ಬೆಂಗಳೂರಿನ ಆಂತರಿಕ ಆರ್ಥಿಕ ಸಲಹೆಗಾರ ಸೋಮನಾಥ ಪಟ್ನೆಯವರಿಗೆ ಡಾ. ಚನ್ನಬಸವ ಪಟ್ಟದ್ದೇವರ ಸಮಾಜ ಸೇವಾ ಪ್ರಶಸ್ತಿ, ಮೈಸೂರು ವಿ.ವಿ.ಯ ಕುಲಪತಿ ಡಾ. ಶರಣಪ್ಪ ಹಲಸೆಯವರಿಗೆ ಡಾ. ಚನ್ನಬಸವ ಪಟ್ಟದ್ದೇವರ ಶೈಕ್ಷಣಿಕ ಸೇವಾ ಪ್ರಶಸ್ತಿ, ಧಾರವಾಡದ ಹಿಂದೂಸ್ತಾನಿ ಗಾಯಕ ಡಾ. ಮೃತ್ಯುಂಜಯ ಶಟ್ಟರ ರವರಿಗೆ ಸಿದ್ದರಾಮ ಜಂಬಲದಿನ್ನಿ ವಚನ ಸಂಗೀತ ಪ್ರಶಸ್ತಿ, ಪ್ರಕಾಶ ಬಸವರಾಜ ಮುಗಳಿಯವರಿಗೆ ಡಾ.ಜೆ.ಹೆಚ್.ಖಂಡೇರಾವ ಚತ್ರಕಲಾ ಪ್ರಶಸ್ತಿ, ಜತ್ತಿ ಫೌಂಡೇಶನ್ ಸಂಸ್ಥಾಪಕ ಧೃವ ಜತ್ತಿಯವರಿಗೆ ಡಾ. ಚನ್ನಬಸವ ಪಟ್ಟದ್ದೇವರ ಯುವ ಪ್ರಶಸ್ತಿ, ಸೋಲಾಪುರದ ಮಲ್ಲಿಕಾರ್ಜುನ ಮೂಲಗೆಯವರಿಗೆ ಬಸವತತ್ವ ಪ್ರಸಾರ ಸೇವಾ ಪ್ರಶಸ್ತಿ, ತಾಳಿಕೋಟೆಯ ಚಂದ್ರಗೌಡ ಕುಲಕರ್ಣಿಯವರಿಗೆ ಡಾ. ಚನ್ನಬಸವ ಪಟ್ಟದ್ದೆವರ ಮಕ್ಕಳ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ ಸಹಾಯವಾಣಿ-೧೯೩೦ ಹಾಗೂ ವೆಬ್ಬಾಟ್ ಉನ್ನತೀಕರಣ
ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಅಲೆಮಾರಿ ಸಮುದಾಯ ಜನರಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಲಾಗಿದೆ ಜಾಗೃತಿ ಮೂಡಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು -ಪಲ್ಲವಿ ಜಿ.