
23rd April 2025
ಬೀದರ. ಏ. 22 -: ಬೆಂಗಳೂರಿನ ಭಾಷಾಂತರ ನಿರ್ದೇಶನಾಲಯದ ಉಪ ನಿರ್ದೇಶಕರಾಗಿರುವ ಜಿಲ್ಲೆಯ ಭಕ್ತರಾಜ ಪಾಟೀಲ ಅವರಿಗೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಸೇವೆಗಾಗಿ ಕೊಡಲಾಗುವ 2023ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ದೊರೆತಿದೆ.
ಬೆಂಗಳೂರಿನಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿಯು ರೂ. 50 ಸಾವಿರ ನಗದು, ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಭಕ್ತರಾಜ ಪಾಟೀಲ ಅವರು ಜಿಲ್ಲೆಯ ಔರಾದ್ ತಾಲ್ಲೂಕಿನ ಬಾಚೆಪಳ್ಳಿ ಗ್ರಾಮದವರಾಗಿದ್ದಾರೆ.
1999 ರಲ್ಲಿ ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆಯ ಅಧೀನದ ಭಾಷಾಂತರ ನಿರ್ದೇಶನಾಲಯದಲ್ಲಿ ಭಾಷಾಂತರಕಾರರಾಗಿ ನೇಮಕಗೊಂಡ ಅವರು, ವಿಧಾನಸಭೆ ಸಚಿವಾಲಯದಲ್ಲಿ ಶಾಖಾಧಿಕಾರಿ, ಅಧೀನ ಕಾರ್ಯದರ್ಶಿ, ರಾಜ್ಯ ಭಾಷೆ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಭಾಷಾಂತರ ಇಲಾಖೆಯ ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕೇಂದ್ರದ ಅಧಿನಿಯಮಗಳ ಕನ್ನಡ ಅನುವಾದ, ಭಾರತೀಯ ದಂಡ ಸಂಹಿತೆ, ದಂಡ ಪ್ರಕ್ರಿಯೆ ಸಂಹಿತೆ, ಭಾರತೀಯ ಸಾಕ್ಷಾ ಅಧಿನಿಯಮಗಳ ಕನ್ನಡ ಅನುವಾದ ಹಾಗೂ ದ್ವಿಭಾಷಾ ಆವೃತ್ತಿ ಪ್ರಕಟಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಬೆಂಗಳೂರಿನ ಬೀದರ್ ಸಾಂಸ್ಕøತಿಕ ಸಂಘದ ಕಾರ್ಯದರ್ಶಿಯೂ ಆಗಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ ಸಹಾಯವಾಣಿ-೧೯೩೦ ಹಾಗೂ ವೆಬ್ಬಾಟ್ ಉನ್ನತೀಕರಣ
ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಅಲೆಮಾರಿ ಸಮುದಾಯ ಜನರಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಲಾಗಿದೆ ಜಾಗೃತಿ ಮೂಡಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು -ಪಲ್ಲವಿ ಜಿ.